ಮುಂಬೈ: ಲೋಕಸಭೆ ಮಾಜಿ ಸ್ಪೀಕರ್ ಹಾಗೂ ಬಿಜೆಪಿ ಹಿರಿಯ ಮಹಿಳಾ ನಾಯಕಿಯಾಗಿದ್ದ ಸುಮಿತ್ರಾ ಮಹಾಜನ್ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ನಿನ್ನೆ ಕರೊನಾ ಪರೀಕ್ಷೆ ಮಾಡಿದ್ದಾಗ ನೆಗಟಿವ್ ಬಂದಿತ್ತು. ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
1989 ರಿಂದ 2019 ರವರೆಗೆ ಅವರು ಮಧ್ಯಪ್ರದೇಶದ ಇಂಧೋರ್ ಲೋಕಸಭೆಯನ್ನು ಪ್ರತಿನಿಧಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಕೆಲಸ ಮಾಡಿದ್ದ ಮಹಿಳಾ ನಾಯಕಿಯಾಗಿದ್ದರು. 2014 ರಿಂದ 2019 ರಲ್ಲಿ ಲೋಕಸಭೆಯ ಸ್ಪೀಕರ್ ಆಗಿ ಸುಮಿತ್ರಾ ಮಹಾಜನ್ ಕೆಲಸ ಮಾಡಿದ್ದರು.
ಸುಮಿತ್ರಾ ಮಹಾಜನ್ ಅವರು ಮೂಲತಃ ಮಹಾರಾಷ್ಟ್ರದ ಚಿಪ್ಲೂನ್ವರು. ಅವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು.


