ತ್ರಿಶೂರ್: ಕಳೆದ ಸೆಪ್ಟೆಂಬರ್‍ನಲ್ಲಿ ಕೋವಿಡ್ ಬಂದು ಗುಣಮುಖರಾಗಿದ್ದ ರಾಜ್ಯ ಕೃಷಿ ಸಚಿವ ವಿ.ಎಸ್. ಸುನಿಲ್ ಕುಮಾರ್ ಅವರಿಗೆ ಮತ್ತೀಗ ಎರಡನೇ ಬಾರಿ ಕೋವಿಡ್ ದೃಢಪಡಿಸಲಾಗಿದೆ. ಆದರೆ ಯಾವುದೇ ರೋಗ ಲಕ್ಷಣಗಳಿಲ್ಲ ಎಮದು ತಿಳಿದುಬಂದಿದೆ.
ಅವರನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಕಳೆದ ಸೆಪ್ಟೆಂಬರ್ 23 ರಂದು ಕೋವಿಡ್ ಬಾಧಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇಂದು ವಿಶೇಷ ಸಮಗ್ರ ತಪಾಸಣೆ ನಡೆಯಲಿದೆ.
ಏತನ್ಮಧ್ಯೆ, ಚುನಾವಣಾ ಪ್ರಚಾರದ ಸಮಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಗೆ ಸ್ಥಳಾಂತರಿಸಲ್ಪಟ್ಟ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರು ಕೋಝಿಕೋಡ್ ವೈದ್ಯಕೀಯ ಕಾಲೇಜಿನಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲಿ ನಿರೀಕ್ಷಣೆಯಲ್ಲಿದ್ದಾರೆ.





