HEALTH TIPS

ಸುಳ್ಳು ಸುದ್ದಿ ಟ್ವೀಟ್: ಸುಮಿತ್ರಾ ಮಹಾಜನ್ ಕ್ಷಮೆ ಕೋರಿದ ಶಶಿ ತರೂರ್

           ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಕುರಿತ ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿ, ಬಳಿಕ ಅಳಿಸಿ ಹಾಕಿದ್ದ ವಿಚಾರವಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ಕ್ಷಮೆ ಯಾಚಿಸಿದ್ದಾರೆ.


          ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸುಮಿತ್ರಾ ಮಹಾಜನ್ ಜೀ ಅವರ ಮಗನ ಜತೆ ಮಾತನಾಡಿ ನಿನ್ನೆ ರಾತ್ರಿ (ಗುರುವಾರ) ಸುಳ್ಳು ಮಾಹಿತಿ ಟ್ವೀಟ್ ಮಾಡಿದ್ದಕ್ಕೆ ಸಂಬಂಧಿಸಿ ಕ್ಷಮೆ ಕೋರಿದೆ. ಅವರಿಗೆ ವಿಷಯ ಅರ್ಥವಾಯಿತಲ್ಲದೆ ನನ್ನ ಬಗ್ಗೆ ಕೃಪಾದೃಷ್ಟಿ ಹೊಂದಿದ್ದಾರೆ. ಸುಮಿತ್ರಾ ಮಹಾಜನ್ ಅವರು ಚೆನ್ನಾಗಿದ್ದಾರೆಂದು ತಿಳಿದು ಬಹಳ ಸಂತಸವಾಗಿದೆ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸಿದ್ದೇನೆ' ಎಂದು ಉಲ್ಲೇಖಿಸಿದ್ದಾರೆ.


          ಸುಮಿತ್ರಾ ಮಹಾಜನ್ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಶಶಿ ತರೂರ್ ಅವರು ಗುರುವಾರ ರಾತ್ರಿ ಟ್ವೀಟ್ ಮಾಡಿದ್ದರು. ಇದು ಗಮನಕ್ಕೆ ಬಂದ ಕೂಡಲೇ ಬಿಜೆಪಿ ನಾಯಕರು ಗಮನ ಸೆಳೆದಿದ್ದರು. ಮಹಾಜನ್ ಅವರು ಆರೋಗ್ಯದಿಂದ ಇದ್ದಾರೆ ಎಂದು ಬಿಜೆಪಿ ನಾಯಕ ಕೈಲಾಸ್ ವಿಜಯವರ್ಗೀಯ ಟ್ವೀಟ್ ಮಾಡಿದ್ದರು. ತಕ್ಷಣ ಎಚ್ಚೆತ್ತುಕೊಂಡ ತರೂರ್ ಟ್ವೀಟ್ ಅಳಿಸಿ ಹಾಕಿದ್ದು, ಸ್ಪಷ್ಟನೆಯನ್ನೂ ನೀಡಿದ್ದರು.

Tweet

Tweet

Spoke to Sumitra Mahajan ji's son to convey my sincere apologies at last night's misinformation. He was most gracious & understanding. Delighted to hear she is very much better. Expressed my best wishes to her & her family.
734
1.1K
13.7K

Replies

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries