HEALTH TIPS

ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತ ಸಾಲುಮರದ ತಿಮ್ಮಕ್ಕ!!

          ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ.

        ಬೆನ್ನು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಅಪೋಲೋ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಆಸ್ಪತ್ರೆ ತುಂಬಾ ಕೊರೋನಾ ರೋಗಿಗಳು ತುಂಬಿ ಹೋಗಿರುವುದರಿಂದ ನಾನ್ ಕೋವಿಡ್ ರೋಗಿಗಳಿಗೆ ಹಾಸಿಗೆ ಸಮಸ್ಯೆ ಎದುರಾಗಿದೆ.

       ಸಾಲುಮರದ ತಿಮ್ಮಕ್ಕ ಸಹ ಹಾಸಿಗೆಗಾಗಿ ಎರಡು ಗಂಟೆಗಳ ಕಾಲ ಪರದಾಟ ನಡೆಸಬೇಕಾಯಿತು. ಇನ್ನು ತಿಮ್ಮಕ್ಕ ಅವರಿಗೆ ಬೆಡ್ ಹೊಂದಿಸಲು ವೈದ್ಯರು ಸಹ ಪ್ರಯತ್ನಿ ನಡೆಸಿದ್ದರು. ನಂತರ ಅವರಿಗೆ ಹಾಸಿಗೆ ಹೊಂದಿಸಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

         ಈ ಹಿಂದೆ ಬಚ್ಚಲುಮನೆಯಲ್ಲಿ ಬಿದ್ದು ಬೆನ್ನುಮೂಳೆ ಮುರಿತವಾಗಿದ್ದ ತಿಮ್ಮಕ್ಕ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಅದೇ ಜಾಗದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries