HEALTH TIPS

RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್!

             ನಾಗ್ಪುರ್ : ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

       ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ ಬಂದಿದ್ದವರು ಸ್ವಯಂಪ್ರೇರಿತರಾಗಿ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

          ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಒಂದೇ ದಿನ 58993 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

       ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 45,391 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 301 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 32,88,540ಕ್ಕೆ ಏರಿಕೆಯಾಗಿದೆ. ಈವರೆಗೂ 26,95,148 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,329 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,34,603 ಸಕ್ರಿಯ ಪ್ರಕರಣಗಳಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries