HEALTH TIPS

ಆತಂಕ ಬೇಡ: ಇಳಿಕೆಯ ಹಾದಿಯಲ್ಲಿ ಸೋಂಕು: ಒಂದೇ ದಿನ 1.65 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 3,460 ಸಾವು!

      ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1.65ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,460 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

      ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 1,65,553 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,78,94,800ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 3,460 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ  3,25,972 ಕ್ಕೆ ಏರಿಕೆಯಾಗಿದೆ. 

        ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,76,309 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,54,54,320ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 21,14,508  ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

      ಕಳೆದ 24 ಗಂಟೆಗಳ ಅವಧಿಯಲ್ಲಿ 20,63,839 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 34,31,83,748ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 21,20,66,614 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ  ಎಂದು ತಿಳಿದುಬಂದಿದೆ. 

       ಸತತ 6ನೇ ದಿನ ಸೋಂಕು ಸಕಾರಾತ್ಮಕ ದರ ಶೇ.10ಕ್ಕಿಂತ ಕಡಿಮೆ:
        ದೇಶದಲ್ಲಿ ಸತತ ಆರನೇ ದಿನವೂ ಸೋಂಕು ಸಕಾರಾತ್ಮಕ ದರ ಶೇ.10ಕ್ಕಿಂತ ಕಡಿಮೆ ಇದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries