HEALTH TIPS

ಮಂಗಳೂರು: ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದ ಕೋವಿಡ್ ಸೋಂಕಿತ, ಅಪಾಯದಿಂದ ಪಾರು

     ಮಂಗಳೂರು: ಯುವಕನೊಬ್ಬ ಕೋವಿಡ್ ವಿಶೇಷ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

    "ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರ್ ಗ್ರಾಮದ ಮರಜೆಪೈಕೊಟ್ಟು ಮನೆಯ ನಿವಾಸಿ ಹರೀಶ್ (30)  ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ. ಈತ ತುಸು ಮಾನಸಿಕ ಸಮಸ್ಯೆಗಳನ್ನು ಹೊಂದಿದ್ದು, ಕೋವಿಡ್ ಸೋಂಕಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ. ಸೋಮವಾರ ಸಂಜೆ ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಿಶೇಷ ವಾರ್ಡ್‌ನ 2 ನೇ ಮಹಡಿಯಿಂದ ಜಿಗಿದಿದ್ದಾನೆ" ಎಂದು ಪೋಲೀಸರು ಹೇಳಿದ್ದಾರೆ.

    ಹರೀಶ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಆತನ ತಲೆಗೆ ಕೆಲವು ಹೊಲಿಗೆಗಳನ್ನು ಹಾಕಲಾಗಿದೆ ಎಂದು ತಿಳಿದುಬಂದಿದೆ.

     ಜಿಲ್ಲಾ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೋವಿಡ್ ವಾರ್ಡ್ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದರು. ಈ ಪ್ರಕರಣದ ಬಗ್ಗೆ ನಗರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries