ತಿರುವನಂತಪುರ: ಕೊರೋನಾ ರಕ್ಷಣಾ ಉತ್ಪನ್ನಗಳಿಗೆ ಹೆಚ್ಚಿನ ಶುಲ್ಕ ವಿಧಿಸುವುದನ್ನು ಪತ್ತೆ ಹಚ್ಚಲು ಎಲ್ಲಾ ಜಿಲ್ಲೆಗಳಲ್ಲಿ ವಿಶೇಷ ಶಾಖೆ ಪೋಲೀಸರ ವಿಶೇಷ ಘಟಕವನ್ನು(ಸ್ಪಷಲ್ ಬ್ರಾಂಚ್) ನಿಯೋಜಿಸಲಾಗಿದೆ ಎಂದು ರಾಜ್ಯ ಪೋಲೀಸ್ ಮುಖ್ಯಸ್ಥ ಲೋಕನಾಥ ಬೆಹ್ರಾ ಹೇಳಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿನ ವೈದ್ಯಕೀಯ ಮಳಿಗೆಗಳು ಸೇರಿದಂತೆ ಸಂಸ್ಥೆಗಳನ್ನು ವಿಶೇಷ ಶಾಖಾ ಅಧಿಕಾರಿಗಳು ಪರಿಶೀಲಿಸುತ್ತಾರೆ. ಕೊರೋನಾ ರಕ್ಷಣಾ ಉತ್ಪನ್ನಗಳನ್ನು ಸರ್ಕಾರ ನಿಗದಿಪಡಿಸಿದ ಬೆಲೆಯಲ್ಲಿ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ. ಉತ್ಪನ್ನಗಳಿಗೆ ಅತಿಯಾದ ಬೆಲೆ ವಿಧಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೋಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ, ಕೆಲವು ಸ್ಥಳಗಳಲ್ಲಿ ರಕ್ಷಣಾ ಸಾಧನಗಳಿಗೆ ಅತಿಯಾದ ಬೆಲೆ ವಿಧಿಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪೋಲೀಸರು ಕಟ್ಟುನಿಟ್ಟಿನ ತಪಾಸಣೆ ನಡೆಸಲು ನಿರ್ಧರಿಸಿರುವರು.






