ಕಾಸರಗೋಡು: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯಿಂದ ಮೇ 30ರಂವು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ 600ಕೇಂದ್ರಗಳಲ್ಲಿ ಬಿಜೆಪಿ ಹಾಗೂ ವಿವಿಧ ಮೋರ್ಚಾಗಳ ನೇತೃತ್ವದಲ್ಲಿ ರಕ್ತದಾನ ಶಿಬಿರ ನಡೆಯಲಿರುವುದು. ಜತೆಗೆ ಆಹಾರ ವಸ್ತುಗಳನ್ನೊಳಗೊಂಡ ಕಿಟ್ ವಿತರಣೆ, ಸ್ಯಾನಿಟೈಸೇಶನ್ ಒಳಗೊಂಡಂತೆ ವಿವಿಧ ಚಟುವಟಿಕೆ ನಡೆಯಲಿರುವುದಾಗಿ ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶ್ರೀಕಾಂತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

