HEALTH TIPS

ತುರ್ತು ಬಳಕೆಗೆ ಹೆಚ್ಚುವರಿ ಆಮ್ಲಜನಕ ಸಂಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

            ನವದೆಹಲಿ: ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯವಿರುವಷ್ಟು ಆಮ್ಲಜನಕವನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

           ನ್ಯಾಯಮೂರ್ತಿ ಡಿ.ವೈ.ಚಂದ್ರೂಡ್‌ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದ್ದು, 'ಹೆಚ್ಚುವರಿ ಆಮ್ಲಜನಕ ಸಂಗ್ರಹವನ್ನು ವಿಕೇಂದ್ರಿಕರಣಗೊಳಿಸಬೇಕು ಎಂದು ಸೂಚಿಸಿದೆ.

'ಇದರಿಂದ, ನಿತ್ಯದ ಆಮ್ಲಜನಕ ಪೂರೈಕೆಯಲ್ಲಿ ತುಸು ವ್ಯತ್ಯಾಸವಾದರೂ, ತಕ್ಷಣವೇ ಸರಿಪಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

          'ಮುಂದಿನ ನಾಲ್ಕು ದಿನಗಳಲ್ಲಿ ತುರ್ತು ಬಳಕೆಗೆ ಬೇಕಾಗುವ ಆಮ್ಲಜನಕವನ್ನು ಸಂಗ್ರಹಿಸಬೇಕು. ಈ ದಾಸ್ತಾನು ಪ್ರತಿ ರಾಜ್ಯ ಮತ್ತು ಕೇಂದ್ರಾಳಿತ ಪ್ರದೇಶಕ್ಕೆ ಪೂರೈಕೆಯಾಗುತ್ತಿರುವುದನ್ನು ವರ್ಚುವಲ್ ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡಬೇಕು. ಇದು ದಿನ ನಿತ್ಯ ರಾಜ್ಯಗಳಿಗೆ ಪೂರೈಕೆಯಾಗುವ ಆಮ್ಲಜನಕದ ಜತೆಗೆ, ಹೆಚ್ಚುವರಿಯಾಗಿ ಪೂರೈಸಬೇಕು' ಎಂದು ನ್ಯಾಯಪೀಠ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries