ತಿರುವನಂತಪುರ: ರಾಜ್ಯ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಮುಂದೂಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಾರ್ಯಕ್ರಮವನ್ನು ಸಾಧ್ಯವಾದಷ್ಟು ಕಡಿಮೆ ಜನರ ಪಾಲ್ಗೊಳ್ಳುವಿಕೆಯೊಂದಿಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ಪ್ರಮಾಣವಚನ ಸಮಾರಂಭವನ್ನು ಆನ್ ಲೈನ್ ವೇದಿಕೆಯಲ್ಲಿ ನಡೆಸಬೇಕು ಎಂಬ ಭಾರತೀಯ ವೈದ್ಯಕೀಯ ಸಂಘದ ಸಲಹೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿ ಮಾಹಿತಿ ನೀಡಿರುವರು. ಮೇ. 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಿಗದಿಯಾಗಿದೆ.
ಪ್ರಸ್ತುತ ಪರಿಸ್ಥಿತಿಗೆ ಅನುಗುಣವಾಗಿ ಕನಿಷ್ಠ ಸಂಖ್ಯೆಯ ಜನರೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಸಿಎಂ ಹೇಳಿದರು. ಸಮಾರಂಭದಲ್ಲಿ ಕೆಲವೇ ಜನರು ಭಾಗವಹಿಸುವುದರೊಂದಿಗೆ ಇದು ನಡೆಯಲಿದೆ. ಪ್ರಮಾಣ ವಚನ ಸ್ವೀಕರಿಸುವ ಮೊದಲು ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುವುದು. ಮುಂಬರುವ ಸಂಪುಟ ಸಭೆಯಲ್ಲಿ ಯಾರ್ಯಾರು ಸಚಿವರಾಗುವರು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಪಿಣರಾಯಿ ವಿಜಯನ್ ಸ್ಪಷ್ಟಪಡಿಸಿದರು.
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಟ್ರಿಪಲ್ ಲಾಕ್‍ಡೌನ್‍ಗಳ ಘೋಷಣೆಯ ಬಳಿಕ ಸರ್ಕಾರವು ವರ್ಚುವಲ್ ಪ್ಲಾಟ್‍ಫಾರ್ಮ್‍ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಡೆಸುವ ಮೂಲಕ ಕೊರೋನದ ಸಂದರ್ಭ ಒಂದು ಮಾದರಿಯಾಗಬೇಕು ಭಾರತೀಯ ವೈದ್ಯಕೀಯ ಸಂಘ ಸೂಚಿಸಿತ್ತು. ಚುನಾವಣೆಯ ಸಂದರ್ಭ ಸಾಕಷ್ಟು ಭದ್ರತಾ ಮುನ್ನೆಚ್ಚರಿಕೆಗಳ ಕೊರತೆಯು ಕೊರೋನಾ ಹರಡಲು ಒಂದು ಕಾರಣವಾಗಿದೆ. ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ವರ್ಚುವಲ್ ಪ್ಲಾಟ್ ಪೋರ್ಮ್‍ಮೂಲಕ ನಡೆಸಿದರೆ ಸೂಕ್ತ ಎಂದು ಐಎಂಎ ಸೂಚಿಸಿತ್ತು.





