ಕಾಸರಗೋಡು: ಜಿಲ್ಲೆಯ ಉಸ್ತುವಾರಿ ಹೊಂದಿರುವ ಬಂದರು, ಪ್ರಾಚ್ಯವಸ್ತು ಇಲಾಖೆ ಸಚಿವ ಅಹಮ್ಮದ್ ದೇವರ್ ಕೋವಿಲ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಕಾಸರಗೋಡಿಗೆ ಶನಿವಾರ ಭೇಟಿ ನೀಡಿದರು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರನ್ನು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಸ್ವಾಗತಿಸಿ ಬರಮಾಡಿಕೊಂಡರು.
ಇದೇ ಸಂದರ್ಭ ಕಾಸರಗೋಡು ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಹಾಗೂ ಜಿಲ್ಲೆಯ ಶಾಸಕರುಗಳಿಗೆ ಜಿಪಂ ವತಿಯಿಂದ ಅಭಿನಂದನಾ ಕಾರ್ಯಕ್ರಮ ಜರುಗಿತು.


