HEALTH TIPS

ತಮಿಳುನಾಡು ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ

           ಚೆನ್ನೈ: ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಅವರೇ ಅಂತಿಮವಾಗಿ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಲಿದ್ದಾರೆ.

         ಶಾಸಕರು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕಾರಿ ಪಳನಿಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಎಐಎಡಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ.

          ಆದಾಗ್ಯೂ, ಬಹುಶಃ ಮೊದಲ ಬಾರಿಗೆ ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕನನ್ನು ಆಂತರಿಕ ವಿರೋಧದ ನಂತರ ಮತ್ತು ದೀರ್ಘಕಾಲದ ಚರ್ಚೆಯ ನಂತರ ಘೋಷಿಸಲಾಗಿದೆ.

        ಮೇ 7 ರಂದು ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಮೊದಲ ಸಭೆ ನಾಯಕನನ್ನು ಆಯ್ಕೆ ಮಾಡದೆ ಕೊನೆಗೊಂಡಿತು. ಈಗ ಅಂತಿಮವಾಗಿ ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries