HEALTH TIPS

ದೆಹಲಿಯ 107 ವೈದ್ಯರು ಸೇರಿದಂತೆ ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 594 ವೈದ್ಯರ ಸಾವು: ಏಮ್ಸ್

              ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 594 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದು, ಈ ಪೈಕಿ ದೆಹಲಿಯಲ್ಲೇ 107 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.


      ದೇಶಾದ್ಯಂತ 2ನೇ ಅಲೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ವೈದ್ಯರ ಕುರಿತ ದತ್ತಾಂಶಗಳನ್ನು ಏಮ್ಸ್ ನೀಡಿದ್ದು, ದೆಹಲಿಯ 107 ವೈದ್ಯರು ಸೇರಿದಂತೆ ದೇಶಾದ್ಯಂತ ಒಟ್ಟು 594 ವೈದ್ಯರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ದೆಹಲಿಯಲ್ಲಿ ಅತ್ಯಧಿಕ ಅಂದರೆ 107 ಮಂದಿ ವೈದ್ಯರು ಸಾವನ್ನಪ್ಪಿದ್ದು, ಬಿಹಾರದಲ್ಲಿ 96 ಮಂದಿ ವೈದ್ಯರು ಸಾವನ್ನಪ್ಪಿದ್ದಾರೆ. ಉಳಿದಂತೆ ಉತ್ತರ ಪ್ರದೇಶದಲ್ಲಿ 67 ಮಂದಿ ವೈದ್ಯರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ 8 ಮಂದಿ ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದೆ,

        ಕಳೆದ ಮೊದಲ ಅಲೆಯಲ್ಲಿ ದೇಶದಲ್ಲಿ 748 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದರು. ಆದರೆ 2ನೇ ಅಲೆ ಆರಂಭವಾಗಿ 3 ತಿಂಗಳಲ್ಲಿಯೇ 594 ಮಂದಿ ವೈದ್ಯರು ಜೀವಕಳೆದುಕೊಂಡಿದ್ದಾರೆ. ಕೊರೋನಾ ಸೋಂಕಿನ 2ನೇ ಅಲೆ ಅತ್ಯಂತ ಮಾರಣಾಂತಿಕವಾಗಿ ಪರಿಣಮಿಸಿದ್ದು, ಪ್ರಮುಖವಾಗಿ ಆರೋಗ್ಯ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಕಷ್ಟು ಮಂದಿ ಸಿಬ್ಬಂದಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಐಎಂ ಅಧ್ಯಕ್ಷ ಡಾ.ಜೆಎ ಜಯಲಾಲ್ ಹೇಳಿದ್ದಾರೆ.

         ಪ್ರಸ್ತುತ ಐಎಂಎ ಬಳಿ 3.5 ಲಕ್ಷ ಕಾರ್ಯನಿರತ ವೈದ್ಯ ಸದಸ್ಯರ ದತ್ತಾಂಶವಿದ್ದು, ಇಂದು ದೇಶಾದ್ಯಂತ 12ಲಕ್ಷಕ್ಕೂ ಅಧಿಕ ವೈದ್ಯರು ಕೋವಿಡ್ ಸಾಂಕ್ರಾಮಿಕದ ವೇಳೆ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries