ತಿರುವನಂತಪುರ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಲಾಕ್‍ಡೌನ್ ನ್ನು ಜೂನ್ 16 ರ ವರೆಗೆ ವಿಸ್ತರಿಸಲಾಯಿತು. ಕೋವಿಡ್ ವಿಸ್ತರಣೆ ದರ ನಿರೀಕ್ಷೆಯಷ್ಟು ಕಡಿಮೆಯಿಲ್ಲದ ಕಾರಣ ರಾಜ್ಯದಲ್ಲಿ ಪ್ರಸ್ತುತ ಲಾಕ್-ಡೌನ್ ನಿಬರ್ಂಧಗಳನ್ನು ಜೂನ್ 16 ರವರೆಗೆ ವಿಸ್ತರಿಸಲಾಗಿದೆ.
ಕಟ್ಟುನಿಟ್ಟಿನ ನಿರ್ಬಂಧಗಳೊಂದಿಗೆ ಸಂಪೂರ್ಣ ಲಾಕ್ ಡೌನ್ ಇರುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು. ಜೊತೆಗೆ ಜೂ.12 ಮತ್ತು 13 ರಂದು ಕಟ್ಟುನಿಟ್ಟಿನ ಕಠಿಣ ನಿಯಂತ್ರಣ ವಿಧಿಸಲಾಗಿದೆ.
ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಕಂಪನಿಗಳು, ಉದ್ಯಮಕ್ಕೆ ಕಚ್ಚಾ ವಸ್ತುಗಳು (ಪ್ಯಾಕೇಜಿಂಗ್ ಸೇರಿದಂತೆ) ಮತ್ತು ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವ ಕಂಪನಿಗಳಿಗೆ ಜೂನ್ 16 ರವರೆಗೆ ಪರವಾನಗಿ ನೀಡಲಾಗುತ್ತದೆ. ಬ್ಯಾಂಕುಗಳು ಈಗಿರುವಂತೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ತೆರೆದಿರುತ್ತವೆ.
ಏತನ್ಮಧ್ಯೆ, ರಾಜ್ಯದಲ್ಲಿ ಇಂದು 9313 ಜನರಿಗೆ ಕೋವಿಡ್ ದೃಢಪಡಿಸಲಾಗಿದೆ. 221 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 10,157 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 70,569 ಮಾದರಿಗಳನ್ನು ಪರೀಕ್ಷಿಸಲಾಯಿತು. ಪರೀಕ್ಷಾ ಸಕಾರಾತ್ಮಕತೆ ದರ ಶೇ.13.2. ನಿಯತ ಮಾದರಿ, ಸೆಂಟಿನೆಲ್ ಮಾದರಿ, ಸಿಬಿಎಸ್ ಟಿ, ಟ್ರುನಾಟ್, ಪಿಒಸಿಟಿ. ಪಿಸಿಆರ್, ಆರ್ಟಿ ಎಲ್.ಎ.ಎಂ..ವಿ ಮತ್ತು ಪ್ರತಿಜನಕ ಪರೀಕ್ಷೆ ಸೇರಿದಂತೆ ಒಟ್ಟು 2,05,78,167 ಮಾದರಿಗಳನ್ನು ಈವರೆಗೆ ಪರೀಕ್ಷಿಸಲಾಗಿದೆ.


