HEALTH TIPS

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ರೂ. ಬಹುಮಾನ!

              ಮಿಜೋರಾಂ: ಅತಿ ಹೆಚ್ಚು ಮಕ್ಕಳನ್ನು ಪಡೆದರೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸಿ ಸಚಿವರು ಭಾರಿ ವಿವಾದಕ್ಕೆ ಕಾರಣರಾಗಿದ್ದಾರೆ.

           ಸಣ್ಣ ಮಿಝೊ ಸಮುದಾಯಗಳಲ್ಲಿ ಜನಸಂಖ್ಯೆಯ ಬೆಳವಣಿಗೆಯನ್ನು ಉತ್ತೇಜಿಸಲು ಮಿಜೋರಾಂ ಸಚಿವರೊಬ್ಬರು ತಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಜೀವಂತ ಪೋಷಕರಿಗೆ 1 ಲಕ್ಷ ರೂ. ನಗದು ಪ್ರೋತ್ಸಾಹ ಧನವನ್ನು ನೀಡುವುದಾಗಿ ಘೋಷಿಸಿದ್ದಾರೆ.

         ಈ ಬಹುಮಾನವನ್ನು ಘೋಷಿಸಿರುವ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಕನಿಷ್ಠ ಮಕ್ಕಳ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.ಭಾರತದ ಹಲವು ರಾಜ್ಯಗಳಲ್ಲಿ ಜನಸಂಖ್ಯಾ ನಿಯಂತ್ರಣ ನೀತಿಯನ್ನು ಪ್ರತಿಪಾದಿಸುತ್ತಿರುವ ಸಮಯದಲ್ಲಿ ಈ ಘೋಷಣೆ ಮಾಡಲಾಗಿದೆ.

       ಮಿಝೋ ಬುಡಕಟ್ಟು ಪಂಗಡದ ಉಳಿವು ಮತ್ತು ಅಭಿವೃದ್ಧಿಗೆ ಜನಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ನಾನು ಈಗಲೂ ಹೇಳಿಕೆ ಬದ್ಧನಾಗಿದ್ದು, ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

         ಭಾನುವಾರ ಅಪ್ಪಂದಿರ ದಿನ ಸಂದರ್ಭದಲ್ಲಿ ರಾಯ್ಟೆ ಅವರು ತಮ್ಮ ಐಜಾಲ್ ಈಸ್ಟ್‌ 2 ವಿಧಾನಸಭಾ ಕ್ಷೇತ್ರದೊಳಗೆ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಹೊಂದಿರುವ 1 ಲಕ್ಷ ರೂ. ನಗದು ಪ್ರೋತ್ಸಾಹ ಧನ ನೀಡುವುದಾಗಿ ಗೋಷಿಸಿದರು.

        ವ್ಯಕ್ತಿಗೆ ಪ್ರಮಾಣಪತ್ರ ಮತ್ತು ಟ್ರೋಫಿ ಕೂಡ ಸಿಗಲಿದೆ ಎಂದು ಸಚಿವರು ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries