ಕಾಸರಗೋಡು: ಕರ್ನಾಟಕದ ವಿವಿಧ ಕೋರ್ಸ್‍ಗಳ ಪರೀಕ್ಷೆಗಳಿಗೆ ಹಾಜರಾಗುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ಇಂದಿನಿಂದ ಆಯಾ ಪ್ರದೇಶಗಳ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ.
ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ವಿವಿಧೆಡೆ ಪರೀಕ್ಷೆಗೆ ಹಾಜರಾಗಲು ತೆರಳುವ ವಿದ್ಯಾರ್ಥಿಗಳಿಗೆ ಕೋವಿಡ್ ವಾಕ್ಸಿನೇಷನ್ ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ 18 ವರ್ಷಕ್ಕಿಂತ ಅಧಿಕ ವಯೋಮಾನದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆಗೆ ಸಿದ್ಧತೆ ನಡೆಸಲಾಗಿದೆÉಂದು ಜಿಲ್ಲಾಧಿಕಾರಿ ಡಾ. ಡಿ.ಸಜಿತ್ ಬಾಬು ತಿಳಿಸಿದ್ದಾರೆ. ಜೂ.28 ರಿಂದ ಪರೀಕ್ಷೆಯ ಹಾಲ್ ಟಿಕೆಟ್ ಸಹಿತ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಜರಾಗಿ ವಾಕ್ಸಿನ್ ಸ್ವೀಕರಿಸಬಹುದು ಎಂದು ಅವರು ತಿಳಿಸಿರುವರು.





