ಕುಂಬಳೆ: ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಾ ಇರುವ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠಕ್ಕೆ ಕೇರಳ ಸರಕಾರವು 2019-20ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಅಂಗೀಕಾರವನ್ನು ನೀಡಿ ಆದೇಶವನ್ನು ಹೊರಡಿಸಿದೆ.
ಎಲ್.ಕೆ.ಜಿ ಯಿಂದ 10ನೇ ತರಗತಿಯ ತನಕ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ. 2001ನೇ ಇಸವಿಯಲ್ಲಿ ಶಾಲೆಯನ್ನು ಪ್ರಾರಂಭಿಸಲಾಗಿತ್ತು. ಕಳೆದ ಲಾಕ್‍ಡೌನ್ ಸಂದರ್ಭದಲ್ಲಿ ಆರಂಭಿಸಲಾದ ಆಲ್‍ಲೈನ್ ಶಿಕ್ಷಣವು ಪ್ರಸ್ತುತ ಮುಂದುವರಿಯುತ್ತಿದೆ.
ಮಕ್ಕಳ ವಿದ್ಯಾಭ್ಯಾಸಕ್ಕೆ ಎಲ್ಲಾ ಸೌಲಭ್ಯಗಳನ್ನೂ ವ್ಯವಸ್ಥೆಗೊಳಿಸುವಲ್ಲಿ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ವೃಂದದ ಸತತ ಪರಿಶ್ರಮವಿದೆ.
ಅಂಗೀಕಾರವನ್ನು ನೀಡಿದ ಕೇರಳ ರಾಜ್ಯ ಸರಕಾರಕ್ಕೆ ವಿದ್ಯಾಲಯದ ಆಡಳಿತ ಮಂಡಳಿಯು ಕೃತಜ್ಞತೆಯನ್ನು ಸಲ್ಲಿಸಿದೆ.





