ಕಾಸರಗೋಡು: ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಕಾಸರಗೋಡು ಬ್ಲಾಕ್ ಪಂಚಾಯತ್ ನಿಂದ ಗ್ರಾಮ ಪಂಚಾಯತ್ ಗಳಿಗೆ ಪಲ್ಸ್ ಆಕ್ಸಿ ಮೀಟರ್ ಮತ್ತು ಪಿ.ಪಿ.ಇ.ಕಿಟ್ ವಿತರಣೆ ಶನಿವಾರ ಜರುಗಿತು.
ಮೊದಲ ಹಂತದಲ್ಲಿ ತಲಾ 100 ಪಿಪಿ.ಇ. ಕಿಟ್ ಗಳು, ತಲಾ 10 ಪಲ್ಸ್ ಆಕ್ಸಿ ಮೀಟರ್ ಗಳನ್ನು ವಿತರಿಸಲಾಗಿದೆ. ಮಧೂರು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಮಾರಂಭದಲ್ಲಿ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಸಿ.ಎ.ಸೈಮಾ ಅವರು ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ ಅವರಿಗೆ ಪ್ರತಿರೋಧ ಕಿಟ್ ವಿತರಿಸಿದರು. ಉಪಾಧ್ಯಕ್ಷ ಪಿ.ಎ. ಅಶ್ರಫ್ ಆಲಿ, ವಿವಿಧ ಸ್ಥಾಯೀ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಸಿ.ಎ.ಸೈಮಾ ಅವರು ಗ್ರಾಮ ಪಂಚಾಯತ್ ಅಧ್ಯಕ್ಷೆ ನ್ಯಾಯವಾದಿ ಸಮೀರಾ ಫೈಝಲ್ ಅವರಿಗೆ ಪ್ರತಿರೋಧ ಕಿಟ್ ವಿತರಿಸಿದರು. ವಿವಿಧ ಸ್ಥಾಯೀ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಚೆಮ್ನಾಡು ಗ್ರಾಮ ಪಂಚಾಯತ್ ನಲ್ಲಿ ಈ ಸಂಬಂಧ ಜರುಗಿದ ಸಮಾರಂಭದಲ್ಲಿ ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಸಿ.ಎ.ಸೈಮಾ ಅವರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಫೈಝಾ ಅಬೂಬಕ್ಕರ್ ಅವರಿಗೆ ಪ್ರತಿರೋಧ ಕಿಟ್ ವಿತರಿಸಿದರು. ಬ್ಲೋಕ್ ಪಂಚಾಯತ್ ಉಪಾಧ್ಯಕ್ಷ ಪಿ.ಎ.ಅರಫಲಿ, ಸ್ಥಾಯೀ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಚೆಂಗಳ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಮಾರಂಭದಲ್ಲಿ ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಸಿ.ಎ.ಸೈಮಾ ಅವರು ಗ್ರಾಮ ಪಂಚಾಯತ್ ಅಧ್ಯಕ್ಷ ಖಾದರ್ ಬದ್ರಿಯಾ ಅವರಿಗೆ ಪ್ರತಿರೋಧ ಕಿಟ್ ವಿತರಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಮುಂದಿನ ಹಂತದಲ್ಲಿ ಬದಿಯಡ್ಕ ಸಮುದಾಯ ಆರೋಗ್ಯ ಕೇಂದ್ರಕ್ಕೆ 100 ಪಿ.ಪಿ.ಇ. ಕಿಟ್ ಮತ್ತು 10 ಪಲ್ಸ್ ಆಕ್ಸಿ ಮೀಟರ್ ಗಳನ್ನು ಬ್ಲೋಕ್ ಪಂಚಾಯತ್ ವತಿಯಿಂದ ವಿತರಿಸಲಾಗುವುದು ಎಂದು ಅಧ್ಯಕ್ಷೆ ಸಿ.ಎ.ಸಮೀರಾ ತಿಳಿಸಿದರು.





