ಬದಿಯಡ್ಕ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷ ಕಾಸರಗೋಡು ಮಂಡಲ ಸಮಿತಿ ಕಛೇರಿಯಲ್ಲಿ ನಡೆದ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಬಿಜೆಪಿ ಬದಿಯಡ್ಕ ಪಂಚಾಯತ್ ಉಪಾಧ್ಯಕ್ಷ ೀ ಮಹೇಶ್ ವಳಕ್ಕುಂಜ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷ ಹರೀಶ್ ನಾರಂಪಾಡಿ ಉದ್ಘಾಟಿಸಿದರು. ಬಿಜೆಪಿ ಎಸ್ಟಿ ಮೋರ್ಚಾ ಕಾಸರಗೋಡು ಜಿಲ್ಲಾ ಅಧ್ಯಕ್ಷ ಈಶ್ವರ ಮಾಸ್ಟರ್, ಯುವ ಮೋರ್ಚಾ ಕಾಸರಗೋಡು ಮಂಡಲ ಅಧ್ಯಕ್ಷ ರಕ್ಷಿತ್ ಕೆದಿಲಾಯ ಉಪಸ್ಥಿತರಿದ್ದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಬದಿಯಡ್ಕ ತಾಲೂಕು ಸಹ ಶಾರೀರಿಕ ಪ್ರಮುಖ್ ನವೀನ್ ಕುಮಾರ್ ತರಬೇತಿ ನಡೆಸಿಕೊಟ್ಟರು.ಕಾರ್ಯಕರ್ತರಾದ ಲೋಹಿತ್ ಮುಂತಾದವರು ಉಪಸ್ಥಿತರಿದ್ದರು.





