HEALTH TIPS

ಕರ್ನಾಟಕದಿಂದ ಕೇರಳಕ್ಕೆ ಜುಲೈ 12ರಿಂದ ಸರ್ಕಾರಿ ಬಸ್ ಸಂಚಾರ

              ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಂತರ ರಾಜ್ಯಗಳ ಬಸ್ ಸಂಚಾರವನ್ನು ಪುನಃ ಆರಂಭಿಸುತ್ತಿದೆ. ಜುಲೈ 12ರಿಂದ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳ ರಾಜ್ಯಕ್ಕೆ ಬಸ್‌ಗಳ ಸಂಚಾರ ಆರಂಭವಾಗಲಿದೆ.

        ಕೋವಿಡ್ ಲಾಕ್‌ಡೌನ್ ಕಾರಣ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಅನ್‌ಲಾಕ್ ಜಾರಿಗೊಳಿಸಿರುವ ಕಾರಣ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಕರ್ನಾಟಕದಿಂದ ಬಸ್ ಸಂಚಾರ ಪುನಃ ಆರಂಭವಾಗುತ್ತಿದೆ.

         ಜುಲೈ 12ರಿಂದ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್‌ಗಳನ್ನು ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಬಸ್ ಸಂಚಾರ ನಡೆಸಲಿವೆ.

         ಕರ್ನಾಟಕ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಬಸ್‌ಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಅಥವ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.

           ವಿದ್ಯಾರ್ಥಿಗಳು, ಶಿಕ್ಷಣ, ವ್ಯವಹಾರ ಮತ್ತು ಇತರ ಕಾರಣಗಳಿಗಾಗಿ ಕರ್ನಾಟಕಕ್ಕೆ ಪ್ರತಿನಿತ್ಯ ಸಂಚಾರ ನಡೆಸುವ ಜನರು 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿಯನ್ನು ಹೊಂದಿರತಕ್ಕದ್ದು.

           ಬಸ್‌ಗಳಲ್ಲಿ ಸಂಚಾರ ನಡೆಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು 080-26252625 ಸಂಖ್ಯೆಗೆ ಕರೆ ಮಾಡಬಹುದು.

             ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್‌ಸೈಟ್‌ಗೆ ಭೇಟಿ ನೀಡಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದು. ನಿಗಮದ/ ಫ್ರಾಂಚೈಸಿ ಕೌಂಟರ್‌ಗಳ ಮುಖಾಂತರ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಪ್ರಯಾಣಿಕರು ಈ ಬಸ್‌ಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries