HEALTH TIPS

2017ರಿಂದ 19ವರೆಗೆ ರಸ್ತೆ ಅಪಘಾತಗಳಲ್ಲಿ 4.5 ಲಕ್ಷಕ್ಕೂ ಹೆಚ್ಚು ಮಂದಿ ಸಾವು

               ನವದೆಹಲಿ2017 ರಿಂದ 2019 ರವರೆಗೆ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ 4,50,443 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

             ರಾಜ್ಯಸಭೆಯಲ್ಲಿ ಸಚಿವರು ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ರಸ್ತೆ ಅಪಘಾತಗಳ ವಿವರಗಳಂತೆ, 2017 ರಲ್ಲಿ ಒಟ್ಟು 1,47,913 , 2018 ರಲ್ಲಿ 1,51,417 ಮತ್ತು 2019 ರಲ್ಲಿ 1,51,113 ಜನರು ಸಾವನ್ನಪ್ಪಿದ್ದಾರೆ.

            ಶಿಕ್ಷಣ,ತಾಂತ್ರಿಕತೆ (ರಸ್ತೆಗಳು ಮತ್ತು ವಾಹನಗಳು ಸೇರಿ), ಕಾನೂನು ಜಾರಿ ಮತ್ತು ತುರ್ತು ಆರೈಕೆ ಆಧಾರಿತ ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ಸಚಿವಾಲಯ ಬಹುಮುಖಿ ಕಾರ್ಯತಂತ್ರವನ್ನು ರೂಪಿಸಿದೆ ಎಂದು ಗಡ್ಕರಿ ಮಾಹಿತಿ ನೀಡಿದ್ದಾರೆ.

         ಇತ್ತೀಚೆಗೆ ಜಾರಿಗೆ ಬಂದ ಮೋಟಾರು ವಾಹನಗಳ (ತಿದ್ದುಪಡಿ) ಕಾಯ್ದೆ 2019- ತಂತ್ರಜ್ಞಾನ ಬಳಕೆ ಮತ್ತು ಕಟ್ಟುನಿಟ್ಟಿನ ಕ್ರಮ ಜಾರಿಗೆ ಅವಕಾಶ ಮಾಡಿಕೊಟ್ಟಿದ್ದು, ಸಂಚಾರ ನಿಯಮಗಳ ಉಲ್ಲಂಘನೆಗೆ ಕಾನೂನು ಕ್ರಮ ಮತ್ತು ದಂಡವನ್ನು ವಿಧಿಸಲು ಅವಕಾಶ ಮಾಡಿಕೊಟ್ಟಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries