HEALTH TIPS

ದೇಶದ 22 ಜಿಲ್ಲೆಗಳಲ್ಲಿ ಮತ್ತೆ ಕೊರೋನಾ ಹೆಚ್ಚಳ, 54 ಜಿಲ್ಲೆಗಳಲ್ಲಿ ಶೇ. 10 ರಷ್ಟು ಪಾಸಿಟಿವ್ ಪ್ರಕರಣ

            ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು, ಪಾಸಿಟಿವ್ ಪ್ರಕರಣಗಳಲ್ಲಿ ಶೇ. 10 ರಷ್ಟು ಹೆಚ್ಚಳವಾಗಿದೆ ಎಂದು ಮಂಗಳವಾರ ಕೇಂದ್ರ ಸರ್ಕಾರ ಹೇಳಿದೆ.

           20 ಜಿಲ್ಲೆಗಳ ದೈನಂದಿನ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು, ಪಾಸಿಟಿವ್ ಪ್ರಮಾಣ ಹೆಚ್ಚುತ್ತಿರುವ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಜುಲೈ 14-21 ರ ನಡುವೆ ದೇಶದ 46 ಜಿಲ್ಲೆಗಳಲ್ಲಿ ಕೊರೋನಾ ಏರುಮುಖವಾಗಿತ್ತು. ಈಗ ಅವುಗಳ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.

          ಕೇರಳ, ಮಹಾರಾಷ್ಟ್ರ ಮತ್ತು ಐದು ಈಶಾನ್ಯ ರಾಜ್ಯದ ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಾಗುತ್ತಿದ್ದು, ಕಳೆದ ನಾಲ್ಕು ವಾರಗಳಲ್ಲಿ ದೇಶದ 22 ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ.

          ಕೇರಳದ 7 ಜಿಲ್ಲೆಗಳು ಮಹಾರಾಷ್ಟ್ರದ 2 ಜಿಲ್ಲೆಗಳು ಹಾಗೂ ಮಣಿಪುರದ 5 ಜಿಲ್ಲೆಗಳ ಸೇರಿದಂತೆ ದೇಶದ 22 ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚುತ್ತಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿಯಾದ ಲಾವ್ ಅಗರ್ವಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

         ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 29,689 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 415 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries