ಮುಳ್ಳೇರಿಯ: ಕೇರಳ ಪ್ರದೇಶ ಸ್ಕೂಲ್ ಟೀಚರ್ಸ್ ಎಸೋಸಿಯೇಶನ್ ಕುಂಬಳೆ ಇದರ ವತಿಯಿಂದ ಗುರು ಸ್ಪರ್ಶಂ ಎರಡನೇ ಹಂತದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಇದರ ಭಾಗವಾಗಿ ಬೆಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಔಷಧಿ ಕಿಟ್ ಹಸ್ತಾಂತರಿಸಲಾಯಿತು. ಆರೋಗ್ಯ ಕೇಂದ್ರದಲ್ಲಿ ನಡೆದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ. ಎಂ ಬೆಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಧಿಕಾರಿ ಅಖಿಲ್ ರವರಿಗೆ ಔಷಧಿ ಕಿಟ್ ಹಸ್ತಾಂತರಿಸಿ ಉದ್ಘಾಟಿಸಿದರು. ಕೆ.ಪಿ.ಎಸ್.ಟಿ.ಎ ಕುಂಬಳೆ ಉಪಜಿಲ್ಲಾ ಅಧ್ಯಕ್ಷೆ ಜಲಜಾಕ್ಷಿ ಟೀಚರ್ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೆಪಿಎಸ್ ಟಿಎ ನಡೆಸುವ ಕಾರುಣ್ಯ ಚಟುವಟಿಕೆ ವಿದ್ಯಾರ್ಥಿ ಸಮೂಹಕ್ಕೆ ಸೀಮಿತವಾಗಿರದೆ ಸಮಾಜದ ಅಭಿವೃದ್ಧಿಗೆ ಪೂರಕ ವಾಗಿದೆ ಎಂದು ಅಭಿಪ್ರಾಯಪಟ್ಟರು.
ಬೆಳ್ಳೂರು ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಜಯಕುಮಾರ್, ಶಿಕ್ಷಕ ಕುಂಞÂ ರಾಮ ಮಾಸ್ತರ್ ಉಪಸ್ಥಿತರಿದ್ದು ಶುಭಹಾರೈಸಿದರು. ಕಾರ್ಯದರ್ಶಿ ರಾಧಾಕೃಷ್ಣ ಸ್ವಾಗತಿಸಿ, ಕೋಶಾಧಿಕಾರಿ ನಿರಂಜನ ರೈ ಪೆರಡಾಲ ವಂದಿಸಿದರು. ಮುಂದಿನ ಹಂತದಲ್ಲಿ ಕುಂಬಳೆ ಉಪಜಿಲ್ಲಾ ವಿವಿಧ ಆರೋಗ್ಯ ಕೇಂದ್ರಗಳಿಗೆ ಔಷಧಿ ಕಿಟ್ ವಿತರಿಸಲು ತೀರ್ಮಾನಿಸಲಾಯಿತು.


