ತ್ರಿಶೂರ್: ತ್ರಿಶೂರ್ ವೈದ್ಯಕೀಯ ಕಾಲೇಜಿನ 30 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಇಂದು ಕೊರೋನಾ ಸೋಂಕು ದೃಢಪಟ್ಟಿರುವುದರೊಂದಿಗೆ ಮತ್ತೆ ಆತಂಕದ ಕರಿಮೋಡ ಹಬ್ಬಿದೆ. ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಎರಡು ಬ್ಯಾಚ್ ವಿದ್ಯಾರ್ಥಿಗಳು ವೈರಸ್ ಸೋಂಕಿಗೆ ಒಳಗಾಗಿರುವುದು ಖಚಿತಗೊಂಡಿದೆ. ಇದನ್ನು ಅನುಸರಿಸಿ, ಈ ಬ್ಯಾಚ್‌ಗಳಲ್ಲಿರುವ ಎಲ್ಲ ವಿದ್ಯಾರ್ಥಿಗಳನ್ನು ನಿರೀಕ್ಷಣೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ಹಾಸ್ಟೆಲ್ ಮುಚ್ಚುವ ನಿರ್ಧಾರ ಶೀಘ್ರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.




