HEALTH TIPS

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿತ: ದೇಶದಲ್ಲಿಂದು 38,949 ಹೊಸ ಕೇಸ್ ಪತ್ತೆ, 542 ಮಂದಿ ಸಾವು

       ನವದೆಹಲಿ: ಭಾರತದಲ್ಲಿ ಕೊರೋನಾ ಏರಿಳಿಯುತ್ತಿರುವ ಬೆಳವಣಿಗೆ ಮುಂದುವರೆದಿದ್ದು,  ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,949 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 542 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
        ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,10,26,829ಕ್ಕೆ ತಲುಪಿದ್ದು, ಸಾವಿನ 4,12,531ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

         ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,30,422ಕ್ಕೆ ಕುಸಿದಿದೆ. 

      ಈ ನಡುವೆ ಕಳೆದ 24 ಗಂಟೆಗಳಲ್ಲಿ 40,026 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,01,83,876ಕ್ಕೆ ತಲುಪಿದೆ. 

        ಭಾರತದಲ್ಲಿ ಒಂದೇ 19,55,910 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 44,00,23,239 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

        ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

       ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  39,53,43,767 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries