HEALTH TIPS

ರಾಜಸ್ಥಾನದ ಬಿಕಾನೆರ್‌ನಲ್ಲಿ ಭೂಕಂಪ; 5.3ರಷ್ಟು ತೀವ್ರತೆ

            ನವದೆಹಲಿಬುಧವಾರ ಬೆಳಗಿನ ಜಾವ ದೇಶದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ರಾಜಸ್ಥಾನದ ಬಿಕಾನೆರ್‌ನಲ್ಲಿ 5.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದು ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ.


            ರಾಷ್ಟ್ರೀಯ ಭೂಕಂಪನ ವೀಕ್ಷಣಾ ಕೇಂದ್ರದ (ಎನ್‌ಸಿಎಸ್‌) ಪ್ರಕಾರ, ಬಿಕಾನೆರ್‌ನಲ್ಲಿ ಬೆಳಗಿನ ಜಾವ 5:24ಕ್ಕೆ ಭೂಕಂಪ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಸಾವು-ನೋವು ಅಥವಾ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ.

           ಮೇಘಾಲಯದ ಪಶ್ಚಿಮ ಗಾರೊ ಹಿಲ್ಸ್‌ ಮತ್ತು ಲಡಾಖ್‌ ಪ್ರದೇಶಗಳಲ್ಲಿ ಕ್ರಮವಾಗಿ ಬೆಳಗಿನ ಜಾವ 2:10 ಮತ್ತು 4:57ಕ್ಕೆ ಭೂಮಿ ಕಂಪಿಸಿದೆ. ಪಶ್ಚಿಮ ಗಾರೊ ಹಿಲ್ಸ್‌ನಲ್ಲಿ 4.1ರಷ್ಟು ಹಾಗೂ ಲೆಹ್‌- ಲಡಾಖ್‌ನಲ್ಲಿ 3.6ರಷ್ಟು ತೀವ್ರತೆ ಲಘು ಭೂಕಂಪನ ದಾಖಲಾಗಿರುವುದಾಗಿ ಎನ್‌ಸಿಎಸ್‌ ಪ್ರಕಟಿಸಿದೆ.

ಜುಲೈ 15ರಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಲಘು ಭೂಕಂಪನ ಸಂಭವಿಸಿತ್ತು. ಆಗ ರಿಕ್ಟರ್‌ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries