ಬದಿಯಡ್ಕ: ಬದಿಯಡ್ಕ ಮಂಡಲ ಯೂತ್ ಕಾಂಗ್ರೆಸ್ ನೇತೃತ್ವದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಲ್ಲ ವಿಷಯದಲ್ಲಿ ಎಪ್ಲಸ್ ಪಡೆದ ಬದಿಯಡ್ಕ ಪಂಚಾಯತಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕಾಸರಗೋಡು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂಸಿ ಪ್ರಭಾಕರನ್ ಉದ್ಘಾಟಿಸಿ ಮಾತನಾಡಿ ಯೂತ್ ಕಾಂಗ್ರೆಸ್ ಬದಿಯಡ್ಕ ಮಂಡಲ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳ ಮತ್ತು ಸಮಾಜದ ಅತ್ಯಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಸಾಧನೆಗೆ ಸನ್ಮಾನಿಸುವುದು ಉತ್ತಮ ಕಾರ್ಯವಾಗಿದೆ ಎಂದರು.
ಬದಿಯಡ್ಕ ಮಂಡಲ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಪಯ್ಯಲಡ್ಕ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಮಂಡಲ ಕಾಂಗ್ರೆಸ್ ಅಧ್ಯಕ್ಷ ನಾರಾಯಣ ಮಣಿಯಾಣಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪಿಜಿ ಚಂದ್ರಹಾಸ ರೈ, ಪಿಜಿ ಜಗನ್ನಾಥ ರೈ, ಶ್ಯಾಮ್ ಪ್ರಸಾದ್ ಮಾನ್ಯ, ಶಾಫಿ ಗೊಳಿಯಡ್ಕ, ಚಂದ್ರಹಾಸ ಮಾಸ್ತರ್, ಬದಿಯಡ್ಕ ಪಂಚಾಯತಿ ಉಪಾಧ್ಯಕ್ಷ ಎಂ ಅಬ್ಬಾಸ್ ಮಾತನಾಡಿದರು. ಯುವ ಕಾಂಗ್ರೆಸ್ ನೇತಾರ ರವೀಂದ್ರ , ಶೈಫುದಿನ್,ನವೀನ್ ರೈ, ಉಪಸ್ಥಿತರಿದ್ದರು. ಅಧ್ಯಾಪಕ ಸಂಘಟನೆಯ ನೇತಾರ ನಿರಂಜನ ರೈ ಪೆರಡಾಲ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.ಕೆ.ಎಸ್.ಯು. ನೇತಾರ ಶ್ರೀನಾಥ್ ಸ್ವಾಗತಿಸಿ, ವಂದಿಸಿದರು.


