ಕೊಚ್ಚಿ: ವಾಯುಯಾನ ಕ್ಷೇತ್ರದಲ್ಲಿ ಕೋವಿಡ್ ನ ಎರಡನೇ ಅಲೆಯ ಪ್ರಭಾವ ಕಡಿಮೆಯಾಗುತ್ತಿದೆ. ಕಳೆದ ಜೂನ್ ತಿಂಗಳೊಂದರಲ್ಲೇ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದ್ವ್ವಿಗುಣಗೊಂಡಿದೆ. ಕೊಚ್ಚಿ ನಿಲ್ದಾಣದಲ್ಲಿ ಜನವರಿಯಿಂದ ಮೇ ವರೆಗೆ ದೇಶದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ.
ಕಳೆದ ಎರಡು ದಶಕಗಳಲ್ಲಿ ಮೊದಲ ಬಾರಿಗೆ ಕೊಚ್ಚಿ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಏರಿದೆ. 2021 ರ ಜನವರಿಯಿಂದ ಮೇವರೆಗಿನ ಐದು ತಿಂಗಳಲ್ಲಿ 5,89,460 ಅಂತರರಾಷ್ಟ್ರೀಯ ಪ್ರಯಾಣಿಕರು ಕೊಚ್ಚಿ ವಿಮಾನ ನಿಲ್ದಾಣದ ಮೂಲಕ ಹಾದುಹೋದರು. ಇದರೊಂದಿಗೆ ಕೊಚ್ಚಿ ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಮೂರನೇ ಸ್ಥಾನವನ್ನು ತಲುಪಿದೆ. ದೆಹಲಿ ಮತ್ತು ಮುಂಬೈ ಈ ನಿಟ್ಟಿನಲ್ಲಿ ಅಗ್ರ ಎರಡು ವಿಮಾನ ನಿಲ್ದಾಣಗಳಾಗಿವೆ.
ಏಪ್ರಿಲ್‍ನಲ್ಲಿ ಮಾತ್ರ 1,38,625 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಕೊಚ್ಚಿ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ. ಈ ವಿಷಯದಲ್ಲಿ ದೆಹಲಿಯ ನಂತರ ಎರಡನೇ ಸ್ಥಾನದಲ್ಲಿದೆ. ಜನವರಿ-ಮೇ ಅವಧಿಯಲ್ಲಿ ಕೊಚ್ಚಿ ವಿಮಾನ ನಿಲ್ದಾಣದ ಮೂಲಕ ಒಟ್ಟು 15,56,366 (ಅಂತರರಾಷ್ಟ್ರೀಯ / ದೇಶೀಯ) ಪ್ರಯಾಣಿಕರು ಹಾದುಹೋದರು.
ಸೋಂಕಿನ ಸಂಕಷ್ಟದ ವೇಳೆ ಕೇರಳವನ್ನು ವಿಶ್ವದ ಅತ್ಯಂತ ಸುರಕ್ಷಿತ ಲ್ಯಾಂಡಿಂಗ್ ತಾಣಗಳಲ್ಲಿ ಒಂದನ್ನಾಗಿ ಮಾಡಲು ರಾಜ್ಯ ಸರ್ಕಾರ ಕೈಗೊಂಡ ಕ್ರಮವು ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸಿಯಾಲ್ ವ್ಯವಸ್ಥಾಪಕ ನಿರ್ದೇಶಕ ಎಸ್. ಸುಹಾಸ್ ಹೇಳಿರುವರು.





