ತಿರುವನಂತಪುರ: ರಾಜ್ಯದಲ್ಲಿ ಇಂದು ಇಬ್ಬರಿಗೆ ಝಿಕಾ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ನೆಡುಂಕಡ್ ನಿವಾಸಿ (38) ಮತ್ತು ಅನಯರಾ ನಿವಾಸಿ (52)ಗಳು ವೈರಸ್ ಬಾಧಿತರಾದವರಾಗಿದ್ದಾರೆ.
ತಿರುವನಂತಪುರ ವೈದ್ಯಕೀಯ ಕಾಲೇಜಿನ ವೈರಾಲಜಿ ಲ್ಯಾಬ್‍ನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಈ ವೈರಸ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 30 ಜನರಿಗೆ ಝಿಕಾ ವೈರಸ್ ಇರುವುದು ಪತ್ತೆಯಾಗಿದೆ. ಪ್ರಸ್ತುತ 10 ರೋಗಿಗಳು ಉನ್ನತ ಚಿಕಿತ್ಸೆಗೊಳಪಟ್ಟಿದ್ದಾರೆ. ಉಳಿದವರಿಗೆ ನೆಗೆಟಿವ್ ಆಗಿದೆ.





