ಬದಿಯಡ್ಕ: ಏತಡ್ಕದ ಕುಂಬ್ಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಆಶ್ರಯದಲ್ಲಿ ವಾಚನ ಪಕ್ಷದ ಸಮಾರೋಪ ಮತ್ತು ಐ.ವಿ ದಾಸ್ ಸಂಸ್ಮರಣ ಕಾರ್ಯಕ್ರಮವು ಗ್ರಂಥಾಲಯದಲ್ಲಿ ಇತ್ತೀಚೆಗೆ ಜರಗಿತು.
ಗ್ರಂಥಾಲಯದ ಅಧ್ಯಕ್ಷ ಕೆ.ನರಸಿಂಹ ಭಟ್ ಅಧ್ಯಕ್ಷತೆ ವಹಿಸಿ ಐ.ವಿ ದಾಸ್ ಅವರು ಗ್ರಂಥಾಲಯಗಳ ಬೆಳವಣಿಗೆಗೆ ಕೊಟ್ಟ ಕೊಡುಗೆಯನ್ನು ಸ್ಮರಿಸಿ ಮಾತನಾಡಿದರು. ಕಾರ್ಯದರ್ಶಿ ಡಾ.ವೇಣುಗೋಪಾಲ್ ಕಳೆಯತ್ತೋಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ವೈ.ಕೆ ಗಣಪತಿ ಭಟ್ ವಂದಿಸಿದರು.





