ತಿರುವನಂತಪುರ: ಸೋಮವಾರ ಸಹಿತ ಮುಂದಿನ ಐದು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಕೇರಳ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 11 ಇಡುಕ್ಕಿ, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು, ಕಾಸರಗೋಡು, ಜುಲೈ 12 ರಂದು(ಇಂದು) ಇಡುಕ್ಕಿ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಆರೆಂಜ್ ಎಚ್ಚರಿಕೆ ನೀಡಿದೆ. ಭಾರಿ ಮಳೆ ಮತ್ತು ಗಾಳಿಯ ಮುನ್ಸೂಚನೆ ನೀಡಲಾಗಿದೆ. ಹೆಚ್ಚಿನ ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ.ವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.
ಜು. ಜುಲೈ 14 ರಂದು ಇಡುಕ್ಕಿ, ಮಲಪ್ಪುರಂ, ಕೋಝಿಕೋಡ್, ಕಣ್ಣೂರು, ಕಾಸರಗೋಡು, ಜುಲೈ 15 ರಂದು ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆಗಳಿದೆ.
ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು, ನದಿ ತೀರಗಳು ಮತ್ತು ಭೂಕುಸಿತ ಉಂಟಾಗುವ ವ್ಯಾಪ್ತಿಯಲ್ಲಿ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.





