ಕೊಚ್ಚಿ: ಅಂಗಡಿ ಮುಗ್ಗಟ್ಟುಗಳನ್ನು ಸಹಜ ರೂಪದಲ್ಲಿ ತೆರೆಯುವಲ್ಲಿ ಸರ್ಕಾರ ನೀತಿ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೈಕೋರ್ಟ್ ಹೇಳಿದೆ. ಇದಲ್ಲದೆ, ಜನಸಂದಣಿ ನಿಯಂತ್ರಣ ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಜ್ಞರ ಸಮಿತಿಯ ಶಿಫಾರಸಿನ ಮೇರೆಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತು. ಅರ್ಜಿಯ ಕುರಿತು ಇಂದು ತನ್ನ ನಿಲುವನ್ನು ತಿಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ತಿಳಿಸಿದೆ.




