HEALTH TIPS

ಯುಪಿ ಜನಸಂಖ್ಯೆ ನಿಯಂತ್ರಣ ಕರಡು ಮಸೂದೆ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ, ಸರ್ಕಾರಿ ಉದ್ಯೋಗ, ಸಬ್ಸಿಡಿಗೆ ಅನರ್ಹ!

             ಲಖನೌಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕಾಗಿ ಹೊಸ ಮಸೂದೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದೆ.

         ಪ್ರಸ್ತಾವನೆಯ ಅಂಶಗಳ ಪ್ರಕಾರ 2 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಮಟ್ಟದಲ್ಲಿ ಚುನಾವಣೆಗೆ ಸ್ಪರ್ಧಿಸುವುದು, ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕುವುದು ಹಾಗೂ ಈಗಾಗಲೇ ಸರ್ಕಾರಿ ಉದ್ಯೋಗದಲ್ಲಿದ್ದರೆ ಮುಂಬಡ್ತಿಗೆ, ಸರ್ಕಾರದಿಂದ ಸಿಗುವ ಸಬ್ಸಿಡಿಗಳಿಗೆ ಅನರ್ಹರಾಗುತ್ತಾರೆ.

ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗ (ಯುಪಿಎಸ್‌ಎಲ್ ಸಿ) ಈ ಬಗ್ಗೆ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಿದ್ದು, ಈ ಅಂಶಗಳು ಉತ್ತರ ಪ್ರದೇಶ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ರ ಭಾಗವಾಗಿದೆ. ಮಸೂದೆಯಲ್ಲಿನ ಸುಧಾರಣೆಗಾಗಿ ಸಾರ್ವಜನಿಕರು ಸಲಹೆಗಳನ್ನು ನೀಡಬಹುದಾಗಿದ್ದು ಜು.19 ಕೊನೆಯ ದಿನಾಂಕವಾಗಿದೆ.

           ಎರಡು ಮಕ್ಕಾಳ ನೀತಿಯನ್ನು ಅಳವಡಿಸಿಕೊಂಡ ಸರ್ಕಾರಿ ಸೇವೆಯಲ್ಲಿರುವ ನೌಕರರಿಗೆ ಸೇವಾವಧಿಯಲ್ಲಿ ಹೆಚ್ಚುವರಿಯಾಗಿ ಎರಡು ಇನ್ ಕ್ರಿಮೆಂಟ್ ಗಳು, ವೇತನ, ಭತ್ಯೆಗಳ ಸಹಿತ 12 ಪೋಷಕರ ರಜೆ (ಮಾತೃತ್ವ ಅಥವ ಪಿತೃತ್ವ ರಜೆ) ರಾಷ್ಟ್ರೀಯ ಪಿಂಚಣಿ ಯೋಜನೆಯಡಿಯಲ್ಲಿ ಉದ್ಯೋಗಿಗಳ ಕೊಡುಗೆಯಲ್ಲಿ ಶೇ.3 ರಷ್ಟು ಏರಿಕೆಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಈ ಕಾಯ್ದೆಯನ್ನು ಜಾರಿಗೆ ತರುವುದಕ್ಕಾಗಿ ರಾಜ್ಯ ಜನಸಂಖ್ಯೆ ನಿಧಿಯನ್ನು ಸ್ಥಾಪಿಸಲಾಗುತ್ತದೆ.

ಸರ್ಕಾರದ ಕರ್ತವ್ಯಗಳನ್ನು ಪಟ್ಟಿ ಮಾಡಲಾಗಿದ್ದು, "ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೆಟರ್ನಿಟಿ ಕೇಂದ್ರ (ಮಾತೃತ್ವ ಕೇಂದ್ರ)ಗಳನ್ನು ಸ್ಥಾಪನೆ ಮಾಡುವುದರ ಬಗ್ಗೆ ಕರಡು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

            ಈ ಕೇಂದ್ರಗಳಲ್ಲಿ ಹಾಗೂ ಎನ್ ಜಿಒಗಳಲ್ಲಿ ಕುಟುಂಬ ಯೋಜನೆ ವಿಧಾನಗಳಿಗೆ ಅಗತ್ಯವಿರುವ ಗರ್ಭನಿರೋಧಕ ಮಾತ್ರೆಗಳು, ಕಾಂಡೋಮ್ಗಳನ್ನು ವಿತರಣೆ ಮಾಡಲಾಗುತ್ತದೆ. ಹಾಗೂ ಸಮುದಾಯ ಆರೋಗ್ಯ ಕಾರ್ಯಕರ್ತರ ಮೂಲಕ ಗರ್ಭಧಾರಣೆ, ಹೆರಿಗೆ, ಜನನ ಮತ್ತು ಮರಣಗಳ ನೋಂದಣಿಯನ್ನು ರಾಜ್ಯಾದ್ಯಂತ ಮಾಡಲಾಗುತ್ತದೆ ಎಂದು ಮಸೂದಲ್ಲಿ ಹೇಳಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries