HEALTH TIPS

ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ - 19 ಲಸಿಕೆ ಪೂರೈಕೆ- ಕೇಂದ್ರ ಸರ್ಕಾರ

               ನವದೆಹಲಿ: ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಬುಧವಾರ ಹೇಳಿದ್ದಾರೆ.


               ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಗೂ ಮುಂಚಿತವಾಗಿ ಎಲ್ಲಾ ಶಾಲಾ ಶಿಕ್ಷಕರಿಗೂ ಆದ್ಯತೆ ಮೇರೆಗೆ ಲಸಿಕೆ ಹಾಕಲು ಪ್ರಯತ್ನಿಸುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೇಳಿಕೊಂಡಿರುವುದಾಗಿ ತಿಳಿಸಿದ್ದಾರೆ.

           ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಲಸಿಕೆ ಪೂರೈಕೆ ಯೋಜನೆ ಹೊರತಾಗಿಯೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಲಸಿಕೆ ಲಭ್ಯವಿರುವಂತೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಾರ, ಈವರೆಗೂ 58.07 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries