HEALTH TIPS

ಪ್ರಕೃತಿ ಮಾತೆಯ ಕೋಪಕ್ಕೆ ತತ್ತರಿಸಿದ ಅಮೆರಿಕ, ಭೀಕರ ಪ್ರವಾಹಕ್ಕೆ 22 ಜನ ಬಲಿ

                   ಟೆನ್ನೆಸ್ಸೀ:  ಅಮೆರಿಕದ ಮೇಲೆ ಪ್ರಕೃತಿ ಮಾತೆಯ ಮುನಿಸು ಮುಂದುವರಿದಿದೆ. ಪದೇಪದೆ ಒಂದಲ್ಲಾ ಒಂದು ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಅಮೆರಿಕ ನಲುಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಪ್ರಕೃತಿ ವಿಕೋಪಗಳ ಪ್ರಮಾಣವೂ ಹೆಚ್ಚಾಗುತ್ತಿದೆ. ಈಗ ಭೀಕರ ಚಂಡಮಾರುತಕ್ಕೆ ಅಮೆರಿಕದ ದಕ್ಷಿಣ ರಾಜ್ಯ ಟೆನ್ನೆಸ್ಸೀ ಬೆಚ್ಚಿಬಿದ್ದಿದೆ.

            ಪ್ರವಾಹದ ಪರಿಣಾಮ ಟೆನ್ನೆಸ್ಸೀ ರಾಜ್ಯದ ನಗರಗಳು ನರಕವಾಗಿವೆ. 22 ಜನರು ಟೆನ್ನೆಸ್ಸೀ ಪ್ರವಾಹಕ್ಕೆ ಬಲಿಯಾಗಿದ್ದು, 50 ಜನರು ನಾಪತ್ತೆಯಾಗಿದ್ದಾರೆ. ಪ್ರವಾಹ ಹೆಚ್ಚಾದ ಬೆನ್ನಲ್ಲೇ ಸಾವಿರಾರು ಮನೆಗಳ ಪವರ್ ಲೈನ್ ಕಟ್ ಆಗಿದೆ. ಹೀಗಾಗಿ ಜನ ಒಂದು ಕಡೆ ಪ್ರವಾಹದ ಭೀತಿ ಜೊತೆ ಕತ್ತಲೆಯಲ್ಲೇ ನರಕ ಕಾಣುತ್ತಿದ್ದಾರೆ. ಇದೇ ಅಮೆರಿಕದ ಪಶ್ಚಿಮದ ರಾಜ್ಯಗಳಲ್ಲಿ ಭೀಕರ ಕಾಡ್ಗಿಚ್ಚು ಹಾಗೂ ಬಿಸಿಗಾಳಿ ಆವರಿಸಿದ್ದರೆ, ದಕ್ಷಿಣ ರಾಜ್ಯವಾದ ಟೆನ್ನೆಸ್ಸೀಯಲ್ಲಿ ಭೀಕರ ಮಳೆ ಬೀಳುತ್ತಿದೆ.

                ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ನಾಪತ್ತೆಯಾದವರಿಗೆ ಹುಡುಕಾಟ ನಡೆಸಲಾಗುತ್ತಿದೆ. ಪ್ರವಾಹದ ಭೀಕರತೆಗೆ ಸಾಕ್ಷಿ ಎಂಬಂತೆ ಕಾರುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸಾವಿರಾರು ಮನೆಗಳು ಜಲಾವೃತವಾಗಿದ್ದು, ನಿರಾಶ್ರಿತ ಶಿಬಿರಗಳನ್ನು ತೆರೆಯಲಾಗಿದೆ.


              ತಾಪಮಾನಕ್ಕೆ ನಲುಗಿದ ಅಮೆರಿಕ

              ಮಳೆಗಾಲದಲ್ಲಿ ವಿಪರೀತ ಬಿಸಿಲು, ಚಳಿಗಾಲದಲ್ಲಿ ಮಳೆ, ಇನ್ನು ಬೇಸಿಗೆಯಲ್ಲೂ ವರುಣನ ಅಬ್ಬರ. ಹೀಗೆ ಭೂ ವಾತಾವರಣ ವಿಪರೀತ ಬದಲಾಗುತ್ತಿದೆ. ಮಾನವನ ದುರಾಸೆಯಿಂದಾಗಿ ಮಾಲಿನ್ಯ ಸೃಷ್ಟಿಯಾಗಿದೆ. ಮಾಲಿನ್ಯದ ಪರಿಣಾಮ ಭೂಮಿ ಮೇಲಿನ ವಾತಾವರಣ ನಾಶವಾಗುತ್ತಿದೆ. ಯಾವ ಸಮಯದಲ್ಲಿ ಏನಾಗಬೇಕೋ ಅದೆಲ್ಲಾ ಉಲ್ಟಾ ಆಗುತ್ತಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿದೆ. ರೈತರ ಬೆಳೆ ನಾಶವಾಗುವ ಜೊತೆಗೆ ಇದು ಆಹಾರ ಭದ್ರತೆಗೂ ಕಂಟಕ ಎದುರಾಗುವಂತೆ ಮಾಡಿದೆ. ಅಕಾಲಿಕ ಮಳೆ ನೂರಾರು ಅವಾಂತರ ಸೃಷ್ಟಿಸುತ್ತಿದೆ. ಅದರಲ್ಲೂ ಅಮೆರಿಕ ಈ ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ಅಕ್ಷರಶಃ ನಲಗಿ ಹೋಗಿದೆ.

                       ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ..!

                ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಅಮೆರಿಕದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ. ಅದರಲ್ಲೂ ಜಾಗತಿಕ ತಾಪಮಾನ ಏರಿಕೆ ನಿಯಂತ್ರಣಕ್ಕೆ ಅಮೆರಿಕ ತನ್ನ ಬದ್ಧ ಶತ್ರು ಚೀನಾ ಜೊತೆಗೂ ಕೈಜೋಡಿಸಿದೆ. ಇದೆಲ್ಲಾ ಸಾಧ್ಯವಾಗಿದ್ದು ಬೈಡನ್ ದೂರದೃಷ್ಟಿಯಿಂದ ಎನ್ನುತ್ತಾರೆ ಪರಿಸರ ತಜ್ಞರು. ಅಲ್ಲದೆ ಈ ಒಪ್ಪಂದ ಸಾಕಷ್ಟು ಮಹತ್ವ ಪಡೆದಿದೆ. ಭೂಮಿ ಮೇಲೆ ತಾಪಮಾನ ಏರಿಕೆ ಹಾಗೂ ವಾತಾವರಣ ಬದಲಾವಣೆ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿದೆ. ವಿಜ್ಞಾನಿಗಳು ಅದೆಷ್ಟು ಬಾರಿ ಎಚ್ಚರಿಕೆ ನೀಡಿದರೂ ಪ್ರಯೋಜನ ಆಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ನಾಯಕನ ಸ್ಥಾನದಲ್ಲಿ ನಿಂತು, ಈ ಸಮಸ್ಯೆ ಬಗೆಹರಿಸಲು ಬಲಾಢ್ಯ ರಾಷ್ಟ್ರಗಳು ಮುಂದಾಗಬೇಕಿದೆ. ಅದರಲ್ಲೂ ಜಾಗತಿಕ ಶಕ್ತಿಗಳು ಎಂದೇ ಗುರುತಿಸಿಕೊಂಡಿರುವ ಅಮೆರಿಕ-ಚೀನಾ ಭೂಮಿ ತಾಪಮಾನ ನಿಯಂತ್ರಣಕ್ಕೆ ತರುವ ಬಗ್ಗೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕಿದೆ. ಆದರೆ ಇಷ್ಟು ದಿನ ಅದು ಸಾಧ್ಯವಾಗಿರಲಿಲ್ಲ. ಈಗ ಕಾರ್ಯರೂಪಕ್ಕೆ ಬರುವ ಲಕ್ಷಣಗಳು ಗೋಚರಿಸುತ್ತಿವೆ.

                        ಚೀನಾ ಸಾಧನೆ ಜಗತ್ತಿಗೆ ಮಾದರಿ

           10-15 ವರ್ಷದ ಹಿಂದೆ ಚೀನಾ ಎಂದರೆ ಮಾಲಿನ್ಯ, ಮಾಲಿನ್ಯ ಅಂದ್ರೆ ಚೀನಾ ಎಂದು ಜಗತ್ತು ಜರಿಯುತ್ತಿತ್ತು. ಆದರೆ ಈಗ ಇದೇ ಚೀನಾ ಪ್ರಕೃತಿ ಸೊಬಗಿನ ತವರಾಗಿದೆ. ಅದರಲ್ಲೂ ಚೀನಾ ರಾಜಧಾನಿ ಬೀಜಿಂಗ್ ಎಷ್ಟು ಸುಧಾರಿಸಿದೆ ಎಂದರೆ, ಕೆಲವೇ ವರ್ಷಗಳಲ್ಲಿ ಸಂಪೂರ್ಣ ವಾಯು ಮಾಲಿನ್ಯವನ್ನ ಸರ್ಕಾರ ಕಂಟ್ರೋಲ್‌ಗೆ ತಂದಿದೆ. ಮಾಲಿನ್ಯ ನಿಯಂತ್ರಣದ ಹಿಂದೆ ಹಲವು ಕಠಿಣ ಕ್ರಮಗಳು ಕೂಡ ಪ್ರಭಾವ ಬೀರಿವೆ. ಅದರಲ್ಲೂ ಕಾರ್ಬನ್ ಮತ್ತು ಸಿಎಫ್‌ಸಿ ಅನಿಲ ಹೊರಸೂಸುವ ಯಂತ್ರ, ಮತ್ತಿತರ ವಸ್ತುಗಳಿಗೆ ನಿಷೇಧ ಹೇರಿದ್ದು ಫಲ ನೀಡಿದೆ. ಇನ್ನು ಕೈಗಾರಿಕೆಗಳಿಗೆ ನೀಡಿದ ಖಡಕ್ ವಾರ್ನಿಂಗ್ ಕೂಡ ಚೀನಾದ ಮಾಲಿನ್ಯ ನಿಯಂತ್ರಿಸಿದೆ.

                        ಹಿಮ ಪದರ ಕರಗುವ ಆತಂಕ

            2020ರ ಬಗ್ಗೆ ಬೆಚ್ಚಿಬೀಳುವ ಸಂಗತಿಯೊಂದನ್ನು ವಿಜ್ಞಾನಿಗಳು ಬಿಚ್ಚಿಟ್ಟಿದ್ದಾರೆ. ಮಾನವ ಬದುಕಿನ ಇತಿಹಾಸದಲ್ಲಿ 2020 3ನೇ ಅತಿಹೆಚ್ಚು ತಾಪಮಾನ ತೋರಿದ ವರ್ಷವಾಗಿದೆ. 2016, 2019ರ ನಂತರ 2020 ಅತಿ ಹೆಚ್ಚಾದ ತಾಪಮಾನ ಹೊಂದಿರುವ ವರ್ಷವಾಗಿದೆ. ತಾಪಮಾನ ಏರಿಕೆ ಕಡಿವಾಣಕ್ಕೆ ಎಷ್ಟೇ ಮುತುವರ್ಜಿ ವಹಿಸಿದರೂ ಪ್ರಯೋಜನವಾಗುತ್ತಿಲ್ಲ. ತಾಪಮಾನ ಏರಿಕೆ ತಡೆಯಲು ಪ್ಯಾರಿಸ್ ಒಪ್ಪಂದಂತಹ ಪ್ರಯತ್ನ ವಿಫಲವಾಗಿದೆ. 2020ರಲ್ಲಿ ತಾಪಮಾನ 1.2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದ್ರೆ ರಷ್ಯಾದ ಸೈಬೀರಿಯಾ ಪ್ರಾಂತ್ಯದಲ್ಲಿ ಅತಿಹೆಚ್ಚು ತಾಪಮಾನ ಏರಿಕೆಯಾಗಿದೆ. ಇದೆಲ್ಲವನ್ನೂ ನೋಡುತ್ತಿದ್ದರೆ ಭೂಮಿ ಮೇಲೆ ತಾಪಮಾನ ನಿಯಂತ್ರಣ ತುರ್ತು ಅಗತ್ಯವಾಗಿದೆ. ಇಲ್ಲವಾದರೆ ಭವಿಷ್ಯವೇ ಬರಡಾಗುವ ಅಪಾಯವಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries