HEALTH TIPS

ಜಗತ್ತಿನ ಮೊದಲ ಡಿಎನ್‌ಎ ಲಸಿಕೆ: ಝೈಡಸ್ ಕ್ಯಾಡಿಲಾ 3 ಡೋಸ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ

               ನವದೆಹಲಿಝೈಡಸ್ ಕ್ಯಾಡಿಲಾ ಸಂಸ್ಥೆಯ 3 ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.


            ನೀಡಲ್ ಲೆಸ್ (ಸೂಜಿ ರಹಿತ) ಲಸಿಕೆಯಾಗಿರುವ ಮೂರು ಡೋಸ್ ಪ್ರಮಾಣದ ZyCov-D ಲಸಿಕೆಯನ್ನು ತುರ್ತುಬಳಕೆಗೆ ಅನುಮೋದನೆ ನೀಡುವಂತೆ ಕೇಂದ್ರ ಆರೋಗ್ಯ ತಜ್ಞರು ಶಿಫಾರಸ್ಸು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಅದರಂತೆ ಕೊರೋನಾ ಸಾಂಕ್ರಾಮಿಕ (Covid-19 Pandemic) ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಲಸಿಕಾಕರಣ ಕಾರ್ಯಕ್ರಮಕ್ಕೆ ಇದೀಗ ಮತ್ತೊಂದು ಲಸಿಕೆ ಸೇರ್ಪಡೆಯಾಗಿದ್ದು, ಕೇಂದ್ರ ಸರ್ಕಾರವು ಫಾರ್ಮ ಕಂಪನಿ ಝೈಡಸ್ ಕ್ಯಾಡಿಲಾದ (Zydus Cadila) 3 ಡೋಸ್ ಕೊರೊನಾ ಲಸಿಕೆ ZyCov-Dನ ತುರ್ತುಬಳಕೆಗೆ ಅನುಮೋದನೆ ನೀಡಿದೆ.

            ಮೂಲಗಳ ಪ್ರಕಾರ ಭಾರತದ ಔಷಧ ನಿಯಂತ್ರಕ ಜನರಲ್‌ನ (DCGI) ತಜ್ಞರ ಸಮಿತಿಯು ಈ ಲಸಿಕೆಯ ತುರ್ತು ಬಳಕೆಯನ್ನು ಅನುಮೋದಿಸಿದೆ. ಈ ಲಸಿಕೆಯ 2 ಡೋಸ್‌ಗಳ ಪರಿಣಾಮದ ಕುರಿತು ಸಮಿತಿಯು ಫಾರ್ಮಾ ಕಂಪನಿಯಿಂದ ಹೆಚ್ಚುವರಿ ದತ್ತಾಂಶವನ್ನು ಕೋರಿದೆ ಎನ್ನಲಾಗಿದೆ.

ಇನ್ನು ಜೆನೆರಿಕ್ ಫಾರ್ಮಾಸ್ಯುಟಿಕಲ್ ಕಂಪನಿಯಾಗಿರುವ ಕ್ಯಾಡಿಲಾ ಹೆಲ್ತ್‌ಕೇರ್ ಲಿಮಿಟೆಡ್ (Cadila Health Care Limited) ಜುಲೈ 1 ರಂದು ZyCoV-D ಯ ತುರ್ತು ಬಳಕೆಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. 28 ಸಾವಿರ ಸ್ವಯಂಸೇವಕರ ಮೇಲೆ ನಡೆಸಿದ ಕೊನೆಯ ಹಂತದ ಪ್ರಯೋಗದ ಆಧಾರದ ಮೇಲೆ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ಲಸಿಕೆಯ ಪರಿಣಾಮಕಾರಿತ್ವವು ಶೇ. 66.6 ರಷ್ಟಿದೆ ಎಂದು ಈ ವರದಿಯಿಂದ ತಿಳಿದುಬಂದಿತ್ತು. ಈ ಲಸಿಕೆ 12 ರಿಂದ 18 ವಯೋಮಾನದವರಿಗೂ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಆದಾಗ್ಯೂ, ಅದರ ಪ್ರಾಯೋಗಿಕ ಡೇಟಾವನ್ನು ಇನ್ನೂ ಪ್ಯಾರ್ ರಿವ್ಯೂ ಮಾಡಲಾಗಿಲ್ಲ ಎನ್ನಲಾಗಿದೆ.

               ತುರ್ತು ಬಳಕೆಗೆ ಅನುಮೋದನೆ ಪಡೆದ ಜಗತ್ತಿನ ಮೊದಲ ಡಿಎನ್‌ಎ ಲಸಿಕೆ
ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ZyCoV-D (ಝೈಕೋವ್-ಡಿ) ವಿಶ್ವದ ಮೊದಲ ಡಿಎನ್‌ಎ ಲಸಿಕೆಯಾಗಿದ್ದು, ಈಗಾಗಲೇ ದೇಶದಲ್ಲಿ ಸೆರಂ ಇನ್ಸ್ಟಿಟ್ಯೂಟ್ ನ ಕೋವಿಶೀಲ್ಡ್, ಭಾರತ್ ಬಯೋಟೆಕ್ ನ ಕೊವಾಕ್ಸಿನ್, ರಷ್ಯಾದ ಸ್ಪುಟ್ನಿಕ್ ವಿ ಬಳಕೆಯಲ್ಲಿದ್ದು, ಇದಲ್ಲದೆ ಒಟ್ಟು 2 ಲಸಿಕೆಗಳು ಅಂದರೆ ಅಮೆರಿಕದ ಮಾಡರ್ನಾ ಮತ್ತು ಜಾನ್ಸನ್ ಮತ್ತು ಜಾನ್ಸನ್ ಲಸಿಕೆಗಳಉ ತುರ್ತು ಬಳಕೆ ಅನುಮೋದನೆ ಪಡೆದಿವೆ. ಆ ಮೂಲಕ ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದ 6ನೇ ಲಸಿಕೆ ಎಂಬ ಕೀರ್ತಿಗೆ ZyCoV-D ಪಾತ್ರವಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries