ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಹಿನ್ನೆಲೆ ಸಮರೋಪಾದಿಯಲ್ಲಿ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ. ಕಳೆದ 9 ರಿಂದ 10 ಗಂಟೆ ಅವಧಿಯಲ್ಲಿ 48 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಣೆ ಮಾಡಲಾಗಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 214 ದಿನಗಳಾಗಿದ್ದು, ಬುಧವಾರ ರಾತ್ರಿ 7 ಗಂಟೆ ವೇಳೆಗೆ 48,81,588 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 56,57,32,128 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.
ದೇಶದಲ್ಲಿ ಒಂದೇ ದಿನ 35,85,420 ಫಲಾನುಭವಿಗಳಿಗೆ ಮೊದಲ ಡೋಸ್, 12,96,168 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
4 ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ
18 ರಿಂದ 44 ವಯೋಮಾನದವರಿಗೆ ಲಸಿಕೆ
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಒಂದೇ ದಿನ 18 ರಿಂದ 44 ವಯೋಮಾನದ 25,93,571 ಜನರಿಗೆ ಮೊದಲ ಡೋಸ್ ಹಾಗೂ 5,77,183 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 20,80,43,061 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,72,81,211 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ಕೊವಿಡ್-19 ಲಸಿಕೆ ವಿತರಿಸುವಲ್ಲಿ ಈ ರಾಜ್ಯಗಳೇ ಹೆಚ್ಚು
ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಕೊರೊನಾವೈರಸ್ ಲಸಿಕೆ ಸರಬರಾಜು ಪ್ರಮಾಣ
2021ರ ಆಗಸ್ಟ್ 18ರ ಅಂಕಿ-ಅಂಶಗಳ ಪ್ರಕಾರ, 57,88,90,150 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:
* ಪೂರೈಕೆಯಾದ ಲಸಿಕೆ ಪ್ರಮಾಣ - 57,88,90,150
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 18,62,530
* ಬಳಕೆ ಆಗಿರುವ ಲಸಿಕೆ ಪ್ರಮಾಣ - 55,11,64,635
* ಕೊವಿಡ್-19 ಲಸಿಕೆಯ ಲಭ್ಯತೆ - 94,03,637




