ಮಂಜೇಶ್ವರ: ಮಂಜೇಶ್ವರ ಗೋವಿಂದ ಪೈ ಸರ್ಕಾರಿ ಕಾಲೇಜಿನಲ್ಲಿ 5.5 ಕೋಟಿ ವೆಚ್ಚದಲ್ಲಿ ಆಧುನಿಕ ಗ್ರಂಥಾಲಯ ಕಟ್ಟಡ ಮತ್ತು ಮಹಿಳಾ ಹಾಸ್ಟೆಲ್ ನಿರ್ಮಾಣಕ್ಕೆ ಸರ್ಕಾರ ತಾಂತ್ರಿಕ ಅನುಮತಿ ನೀಡಿದೆ ಎಮದು ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದಾರೆ. ಮಹಿಳಾ ಹಾಸ್ಟೆಲ್ 929 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದೆ.
ಸರ್ಕಾರಿ ಏಜೆನ್ಸಿಯಾದ ಕೆ.ಎಸ್.ಐ.ಟಿ.ಐ ಲಿಮಿಟೆಡ್ ಬ್ಯಾಂಕಿನ ನಿರ್ವಹಣೆಯ ಹೊಣೆ ಹೊಂದಿದೆ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಕೆಲಸ ಆರಂಭಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕರು ಹೇಳಿರುವರು.




