HEALTH TIPS

ತಾಯಿ ಮತ್ತು ಶಿಶು ಆಸ್ಪತ್ರೆಯ ವಿದ್ಯುದೀಕರಣ ಕಾಮಗಾರಿಗಳ ಪೂರ್ಣತೆ ಶೀಘ್ರ

                                            

             ಕಾಸರಗೋಡು: ಕಾಞಂಗಾಡಿನ ತಾಯಿ ಮತ್ತು ಶಿಶು ಆಸ್ಪತ್ರೆಯ ವಿದ್ಯುದೀಕರಣ ಕಾಮಗಾರಿಗಳ ಪೂರ್ಣತೆ ಶೀಘ್ರದಲ್ಲಿ ನಡೆಯಲಿದೆ. 2 ವಾರಗಳ ಅವಧಿಯಲ್ಲಿ ಇದನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ತ್ವರಿತಗತಿಯ ಕ್ರಮ ನಡೆಸಲು ನಿರ್ಧರಿಸಲಾಗಿದೆ. 

           ಟ್ರಾನ್ಸ್ ಫಾರ್ಮರ್ ಸ್ಥಾಪನೆ ಮಾತ್ರ ಈ ನಿಟ್ಟಿನಲ್ಲಿ ಬಾಕಿಯಿದ್ದು, ಈ ಸಂಬಂಧ ಟೆಂಡರ್ ಕೋರಲಾಗಿದೆ. ತಾಂತ್ರಿಕ ಸಮಸ್ಯೆಗಳು ಬಗೆಹರಿಸಿ ಸೆ.20ರ ಮುಂಚಿತವಾಗಿ ಟ್ರಾನ್ಸ್ ಫಾರ್ಮರ್ ಸ್ಥಾಪಿಸುವ ನಿರೀಕ್ಷೆಯಿದೆ. ಇದಕ್ಕಾಗಿ 1.82 ಕೋಟಿ ರೂ. ಮೀಸಲಿರಿಸಲಾಗಿದೆ. 

      ಕಾಞಂಗಾಡಿನ ಆಸ್ಪತ್ರೆಯಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಕಾಮಗಾರಿಯ ಕುರಿತು ಅವಲೋಕನ ನಡೆಸಲಾಗಿದೆ. ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಈ ಆಸ್ಪತ್ರೆ ಚಟುವಟಿಕೆ ಆರಂಭಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಭೆ ಸಲಹೆ ನೀಡಿದೆ. 

        ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಮತ್ತು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ನೇತೃತ್ವ ವಹಿಸಿದ್ದರು. ಜಿಲ್ಲಾ ವೈದ್ಯಾಧಿಕಾರಿ(ಆರೋಗ್ಯ) ಡಾ.ಕೆ.ಆರ್.ರಾಜನ್, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ಟಿ.ಮನೋಜ್, ಸಹಾಯಕ ವರಿಷ್ಠಾಧಿಕಾರಿ ಡಾ.ಚಂದ್ರಮೋಹನ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಮೊದಲಾದವರು ಉಪಸ್ಥಿತರಿದ್ದರು. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries