ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರಿಗೆ ಕಳೆದ ಐದು ತಿಂಗಳಿಂದ ಮೊಟಕುಗೊಂಡಿರುವ ಪಿಂಚಣಿಯನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಫ್ರಟೇನಿಟಿ ಮೂಮೆಂಟ್ ಜಿಲ್ಲಾ ಸಮಿತಿ ಅಧ್ಯಕ್ಷ ಸಿ.ಎ ಯೂಸುಫ್ ಆಗ್ರಹಿಸಿದ್ದಾರೆ.
ಅವರು ಕಾಸರಗೋಡು ಹೊಸ ಬಸ್ ನಿಲ್ದಾಣ ವಠಾರದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರು ಹಾಗೂ ಅವರ ಹೆತ್ತವರು ನಡೆಸಿದ ಧರಣಿಯಲ್ಲಿ ಮಾತನಾಡಿದರು. ಓಣಂ ಹಬ್ಬದ ಮುಂಚಿತವಾಗಿ ಎಂಡೋಸಲ್ಫಾನ್ ದುಷ್ಪರಿಣಾಮಪೀಡಿತರಿಗೆ ಪಿಂಚಣಿ ವಿತರಿಸುವುದಾಗಿ ಸರ್ಕಾರ ನೀಡಿದ್ದ ಭರವಸೆ ಈಡೇರಿಲ್ಲ. ಇದರಿಂದ ಸಂತ್ರಸ್ತರ ಕುಟುಂಬ ತೀವ್ರ ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಅಳಲು ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟಿನ ತೀರ್ಪಿನನ್ವಯ ಸಂತ್ರಸ್ತರ ಕುಟುಂಬಕ್ಕೆ ತಲಾ ಐದು ಲಕ್ಷ ರಊ. ಮಂಜೂರುಮಾಡಬೇಕು, ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನ್ಯೂರೋಲಜಿಸ್ಟ್‍ಗಳನ್ನು ನೇಂಇಸುವಂತೆ ಆಗ್ರಹಿಸಲಾಯಿತು.




