HEALTH TIPS

ಭಾರತದ ಮೂರನೇ ಒಂದು ಭಾಗದಷ್ಟು ಜನರಲ್ಲಿ ಅಧಿಕ ರಕ್ತದೊತ್ತಡ: ಅಧ್ಯಯನ

               ನವದೆಹಲಿ: ಭಾರತದಲ್ಲಿ ಮೂರನೇ ಒಂದು ಭಾಗದಷ್ಟು ಪುರುಷರು ಮತ್ತು ಮಹಿಳೆಯರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ, ಪುರುಷರಿಗೆ ಹೋಲಿಸಿದರೆ ಹೆಚ್ಚಿನ ಮಹಿಳೆಯರು ಚಿಕಿತ್ಸೆ ಪಡೆಯುತ್ತಾರೆ ಎಂದು ದಿ ಲ್ಯಾನ್‌ಸೆಟ್‌ನಲ್ಲಿ ಪ್ರಕಟಿಸಿರುವ ಅಧ್ಯಯನ ವರದಿಯಿಂದ ತಿಳಿದು ಬಂದಿದೆ.

          ಅಧ್ಯಯನದ ಪ್ರಕಾರ, ಒಟ್ಟು ಜನಸಂಖ್ಯೆಯ ಶೇ 30ರಷ್ಟು ಮಹಿಳೆಯರು ಮತ್ತು ಶೇ 32ರಷ್ಟು ಪುರುಷರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇದು ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು. ಆದರೆ, ಶೇ 25ರಷ್ಟು ಪುರುಷರು, ಶೇ 35ರಷ್ಟು ಮಹಿಳೆಯರು ಅಧಿಕ ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

            'ಭಾರತದಲ್ಲಿ ಪುರುಷರು ಹೆಚ್ಚಿನ ವೈದ್ಯಕೀಯ ಸೇವೆಯನ್ನು ಪಡೆಯುತ್ತಾರೆ. ಆದರೆ, ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯುತ್ತಿರುವ ಪುರುಷರು ಮತ್ತು ಮಹಿಳೆಯರ ನಡುವೆ ಶೇ 10ರಷ್ಟು ವ್ಯತ್ಯಾಸ ಕಂಡು ಬಂದಿದೆ' ಎಂದು ಹೈದರಾಬಾದ್‌ನ ವಿಜ್ಞಾನಿ ಅವೂಲಾ ಲಕ್ಷ್ಮಯ್ಯ ಹೇಳಿದ್ದಾರೆ.

            ಮೂರು ದಶಕಗಳಲ್ಲಿ 184 ದೇಶಗಳ 10 ಕೋಟಿಗೂ ಅಧಿಕ ಜನರ ರಕ್ತದೊತ್ತಡ ಪರೀಕ್ಷೆಯ ಫಲಿತಾಂಶಗಳನ್ನು ವಿಶ್ಲೇಷಿಸಲಾಗಿದೆ ಎಂದು ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries