ಬದಿಯಡ್ಕ: ಕುಂಬ್ಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಕ್ಯಾನ್ಸರ್ ಸರ್ಜನ್ ಡಾ.ರಮ್ಯಾ ವೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ಮಾಡಿದರು.ನಂತರ ಡಾ.ಮೋಹನ್ ಕುಮಾರ್ ವೈ.ಎಸ್ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದರು.
ಗ್ರಂಥಾಲಯದ ಅಧ್ಯಕ್ಷ ಕೆ. ನರಸಿಂಹ ಭಟ್ ಸ್ವಾತಂತ್ರ್ಯದ ಕುರಿತು ಸ್ವಯಂ ಪ್ರಕಟಿತ ಪ್ರಬಂಧಗಳನ್ನು ಓದಿದರು. ಕಾರ್ಯದರ್ಶಿ ಡಾ.ವೇಣುಗೋಪಾಲ್ ಸ್ವಾಗತಿಸಿ ಉಪಾಧ್ಯಕ್ಷ ವೈ.ಕೆ.ಗಣಪತಿ ಭಟ್ ವಂದಿಸಿದರು.ಕೆ.ಸುಬ್ರಹ್ಮಣ್ಯ ಭಟ್ ನಿರೂಪಿಸಿದರು.





