HEALTH TIPS

ಬಾಂಗ್ಲಾದೇಶಿಗಳ ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕದಲ್ಲಿ ಎನ್‌ಐಎ ಶೋಧಕಾರ್ಯಾಚರಣೆ

               ನವದೆಹಲಿಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್‌ಎಇಐ ಶೋಧಕಾರ್ಯಾಚರಣೆ ನಡೆಸಿದೆ.

        ಬೆಂಗಳೂರಿನ ರಾಮಮೂರ್ತಿ ನಗರದ ಎರಡು ಪ್ರದೇಶದಲ್ಲಿ ಎನ್‌ಐಎ ಶೋಧಕಾರ್ಯಾಚರಣೆ ನಡೆದಿದೆ.

           ರಾಮಮೂರ್ತಿ ನಗರದಲ್ಲಿನ ಬಾಡಿಗೆ ಮನೆಯಲ್ಲಿದ್ದ ಬಾಂಗ್ಲಾದೇಶದ 7 ಮಹಿಳೆಯರು ಹಾಗೂ ಒಂದು ಮಗುವನ್ನು ಮಾನವ ಕಳ್ಳಸಾಗಣೆ ಜಾಲದಿಂದ ಜೂನ್ ನಲ್ಲಿ ರಕ್ಷಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಜಾಲದ ಮೇಲೆ ಎನ್‌ಐಎ ದಾಳಿ ನಡೆದಿದೆ.

           ನೌಕರಿ ಕೊಡಿಸುವ ಆಮಿಷವೊಡ್ಡಿ ಮಹಿಳೆಯರನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ಆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಿಗರ ಕಾಯ್ದೆ, ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಎನ್‌ಐಎ ಪ್ರಕರಣವನ್ನು ಮರುದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದೆ. ಶೋಧಕಾರ್ಯಾಚರಣೆಯಲ್ಲಿ ದಾಖಲೆಗಳು, 6 ಡಿಜಿಟಲ್ ಡಿವೈಸ್ ಗಳು, ಹಾರ್ಡ್ ಡಿಸ್ಕ್ ಗಳು, ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries