ಪಾಲಕ್ಕಾಡ್: ಪಾಲಕ್ಕಾಡ್ ಮತ್ತು ತ್ರಿಶೂರ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.3 ರಷ್ಟಿದ್ದ ಭೂಕಂಪವು ಐದು ಸೆಕೆಂಡುಗಳ ಕಾಲ ನಡೆಯಿತು ಎನ್ನಲಾಗಿದೆ. ನೆಲದಾಳದಲ್ಲಿ ಗುಡುಗು ಶಬ್ದ ಕೇಳಿಸಿತು ಎಂದು ಸ್ಥಳೀಯರು ಹೇಳಿದ್ದಾರೆ.
ಭೂಕಂಪನವು ಪಾಲಕ್ಕಾಡ್ ಪೂರ್ವದ ಗುಡ್ಡಗಾಡು ಪ್ರದೇಶದಲ್ಲಿ ಉಂಟಾಯಿತು. ಪೀಚಿ ಅಣೆಕಟ್ಟು, ತ್ರಿಶೂರ್ ಮತ್ತು ಪಟ್ಟಿಕಾಡ್ ಜಿಲ್ಲೆಗಳಲ್ಲಿ ಭೂಕಂಪನ ಉಂಟಾಗಿದೆ. ಈ ಪ್ರದೇಶದಲ್ಲಿ ಹಲವಾರು ಮನೆಗಳಲ್ಲಿ ಬಿರುಕುಗಳು ಉಂಟಾಗಿವೆ.

