ತಿರುವನಂತಪುರಂ: ಕೇಂದ್ರ ಸರ್ಕಾರದ ಪದ್ಮ ಪ್ರಶಸ್ತಿಯ ಮಾದರಿಯಲ್ಲಿ ಕೇರಳದಲ್ಲಿ ಹೊಸ ಪ್ರಶಸ್ತಿ ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು. ಮುಖ್ಯ ಕಾರ್ಯದರ್ಶಿ ಮಟ್ಟದಲ್ಲಿ ಪ್ರಾಥಮಿಕ ಚರ್ಚೆಗಳನ್ನು ನಡೆಸಲಾಯಿತು. ವಿವರವಾದ ರೂಪುರೇಷೆ ಸಿದ್ಧಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು.
ಕೇರಳದ ಸಾಮಾಜಿಕ-ಸಾಂಸ್ಕøತಿಕ ಜೀವನಕ್ಕೆ ಮಹತ್ವದ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಮದವರು ಮಾಹಿತಿ ನೀಡಿದರು. ವಿಧಾನಸಭೆಯಲ್ಲಿ ಪ್ರಶ್ನೆಗೆ ಮುಖ್ಯಮಂತ್ರಿ ಈ ಬಗ್ಗೆ ಲಿಖಿತವಾಗಿ ಉತ್ತರಿಸಿದರು.


