HEALTH TIPS

ಗೃಹ ಬಳಕೆ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ ಏರಿಕೆ

             ನವದೆಹಲಿ, ಆಗಸ್ಟ್ 17; ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಬೆಲೆ ಏರಿಕೆ ಬಳಿಕ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 859.5 ರೂ. ಆಗಿದೆ.

            ಮಂಗಳವಾರ ಪೆಟ್ರೋಲಿಯಂ ಕಂಪನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್  ಬೆಲೆಯನ್ನು 25 ರೂ. ಏರಿಕೆ ಮಾಡಿವೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 68 ರೂ. ನಷ್ಟು ಏರಿಕೆಯಾಗಿದೆ.

           ಬೆಂಗಳೂರು ನಗರದಲ್ಲಿ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 837.50 ರೂ.ಗಳಿಂದ 863 ರೂ.ಗಳಿಗೆ ಏರಿಕೆಯಾಗಿದೆ. ಈ ಹಿಂದೆ ಜುಲೈ 1ರಂದು ಸಿಲಿಂಡರ್‌ಗಳ ಬೆಲೆಯಲ್ಲಿ 25 ರೂ. ಏರಿಕೆಯಾಗಿತ್ತು.

           ಪೆಟ್ರೋಲಿಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

           ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಗಳ ಏರಿಕೆಯಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷದ ಡಿಸೆಂಬರ್ ಬಳಿಕ ಹಲವು ಬಾರಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿದೆ.

           ತೈಲ ಬೆಲೆಗಳು ಏರಿಕೆಯಾದರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಸಿಲಿಂಡರ್ ಬೆಲೆ ಹೆಚ್ಚಳವಾದರೆ ಹೋಟೆಲ್‌ಗಳಲ್ಲಿ ತಿನಿಸುಗಳ ಬೆಲೆ ಏರಿಕೆಯಾಗುತ್ತದೆ. ರಸ್ತೆ ಬದಿಯಲ್ಲಿ ಆಹಾರ ಉತ್ಪನ್ನಗಳನ್ನು ಮಾರುವ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ.

          ಯಾವ ನಗರದಲ್ಲಿ ಎಷ್ಟು? ಗೃಹ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದ ಬಳಿಕ ಚೆನ್ನೈನಲ್ಲಿ 875.50 ರೂ. ಪಾವತಿ ಮಾಡಬೇಕು. ಲಕ್ನೋದಲ್ಲಿ 897.5 ರೂ., ಅಹಮದಾಬಾದ್‌ನಲ್ಲಿ 866.50 ರೂ. ಆಗಿದೆ.

           ಮುಂಬೈ ನಗರದಲ್ಲಿ 859.5 ರೂ., ಕೋಲ್ಕತ್ತಾದಲ್ಲಿ 866 ರೂ. ಆಗಿದೆ. 2021ರ ಜನವರಿಯಲ್ಲಿ ನವದೆಹಲಿಯಲ್ಲಿ ಸಿಲಿಂಡರ್ ಬೆಲೆ 694 ರೂ. ಆಗಿತ್ತು. ಈಗ 859 ರೂ. ಆಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries