HEALTH TIPS

ಭಾರತದಲ್ಲಿ ಏಕ ಡೋಸ್ ಲಸಿಕೆಯ ತುರ್ತು ಬಳಕೆಗೆ ಜಾನ್ಸನ್ & ಜಾನ್ಸನ್ ಮನವಿ

           ನವದೆಹಲಿ: ಭಾರತದಲ್ಲಿ ಏಕ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಜಾನ್ಸನ್ & ಜಾನ್ಸನ್ ಕಂಪನಿ ಮನವಿ ಸಲ್ಲಿಸಿದೆ.

          ಆಗಸ್ಟ್ 5ರಂದು ಮನವಿ ಸಲ್ಲಿಸಲಾಗಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

          ಬಯಾಲಾಜಿಕಲ್ ಇ ಲಿಮಿಟೆಡ್ ಸಹಯೋಗದೊಂದಿಗೆ ಭಾರತದಲ್ಲಿ ಮತ್ತು ಇತರ ದೇಶಗಳಲ್ಲಿ ಏಕ ಡೋಸ್‌ನ ಕೋವಿಡ್ ಲಸಿಕೆ ಪೂರೈಕೆ ಮಾಡುವುದು ಮಹತ್ವದ ಮೈಲಿಗಲ್ಲಾಗಿದೆ ಎಂದು ಅವರು ಹೇಳಿದ್ದಾರೆ.

         ಭಾರತದಲ್ಲಿ ಏಕ ಡೋಸ್ ಕೋವಿಡ್ ಲಸಿಕೆ ನೀಡಲು ಬದ್ಧರಾಗಿದ್ದೇವೆ. ಈ ಕುರಿತು ಭಾರತ ಸರ್ಕಾರದ ಜತೆ ಮಾತುಕತೆ ನಡೆಯುತ್ತಿದೆ ಎಂದು ಈಗಾಗಲೇ ಕಂಪನಿ ತಿಳಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries