HEALTH TIPS

ಕೋವಿಡ್ ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್ ಘೋಷಿಸಿದ ಕೇರಳ

                ತಿರುವನಂತಪುರಂ: 1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್ ವಿಧಿಸಲಾಗುವುದು ಎಂದು ಬುಧವಾರ ಕೇರಳ ಆರೋಗ್ಯ ಸಚಿವರು ಹೇಳಿದ್ದಾರೆ.

            ಕೋವಿಡ್ ಹೆಚ್ಚಿರುವ ಸ್ಥಳಗಳಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆಯಲು ಅನುಮತಿಸಲಾಗುತ್ತದೆ. ಉಳಿದ ಕಡೆ ಭಾನುವಾರ ಹೊರತುಪಡಿಸಿ ಎಲ್ಲಾ ಅಂಗಡಿಗಳು ವಾರದ ಆರು ದಿನ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುತ್ತದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದಾರೆ.

            ಆಗಸ್ಟ್ 15 ಮತ್ತು ಆಗಸ್ಟ್ 22 ಭಾನುವಾರಗಳಾಗಿದ್ದರೂ, ಕ್ರಮವಾಗಿ ಸ್ವಾತಂತ್ರ್ಯ ದಿನ ಮತ್ತು ಓಣಂ ಕಾರಣದಿಂದ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗುತ್ತದೆ. ರಾಜ್ಯವು ಅತ್ಯಧಿಕ ಪಾಸಿಟಿವ್ ಪ್ರಮಾಣ, ಶೇಕಡಾ 12 ರಷ್ಟು ಮತ್ತು 1.74 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿದೆ ಎಂದು ವೀಣಾ ಅವರು ವಿಧಾನಸಭೆಗೆ ತಿಳಿಸಿದ್ದಾರೆ.

          ಅಂಗಡಿ ತೆರೆಯುವ ಸಮಯವನ್ನು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಅಂಗಡಿಗಳಿಗೆ ಭೇಟಿ ನೀಡುವ ಜನರಿಗೆ 25 ಚದರ ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದರು.

             ರಾಜ್ಯದಲ್ಲಿ ಕೋವಿಡ್ ಹರಡುವಿಕೆಯ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಸಚಿವರು ವಿನಂತಿಸಿದರು. "ಹಬ್ಬದ ಸಮಯದಲ್ಲಿ ಜನಸಂದಣಿಯನ್ನು ನಿರ್ವಹಿಸಲು ಮತ್ತು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಅಂಗಡಿಗಳಲ್ಲಿ ವ್ಯವಸ್ಥೆ ಇರಬೇಕು. ಈ ಕುರಿತು ಪೊಲೀಸರು ಮತ್ತು ಸ್ಥಳೀಯ ಸಂಸ್ಥೆಗಳು ಮೇಲ್ವಿಚಾರಣೆ ಮಾಡಬೇಕು ಎಂದು ವೀಣಾ ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries