ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಉಪಟಳಕ್ಕೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಎ.ಕೆ.ಶಸೀಂದ್ರನ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ಉದುಮಾ ಶಾಸಕ ನ್ಯಾಯವಾದಿ ಸಿ.ಎಚ್.ಕುಂಞಂಬು ಅವರ ನೇತೃತ್ವದಲ್ಲಿ ಕಾರಡ್ಕ ಬ್ಲೋಕ್ ಪಂಚಾಯತ್ ಅಧ್ಯಕ್ಷ ಸಿಜಿ ಮ್ಯಾಥ್ಯೂ, ದೇಲಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನ್ಯಾಯವಾದಿ ಎ.ಪಿ.ಉಷಾ, ಮುಳಿಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ವಿ.ಮಿನಿ, ಕೆ.ಮುರಳೀಧರನ್, ಕೃಷ್ಣರಾಜ್ ಮೊದಲಾದವರು ಈ ಸಂಬಂಧ ಸಚಿವರನ್ನು ಭೇಟಿ ಮಾಡಿದರು.
ಕಾಡಾನೆ ಸಹಿತ ಅರಣ್ಯ ಪ್ರಾಣಿಗಳ ಉಪಟಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವುದಾಗಿ ಸಚಿವ ಭರವಸೆ ನೀಡಿದರು. ತ್ರಿಸ್ತರ ಪಂಚಾಯತ್ ಗಳ ಸಹಕಾರದೊಂದಿಗೆ ಯೋಜನೆ ಜಾರಿಗೊಳಿಸುವ ಯೋಚನೆಯೂ ನಡೆದುಬರುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಕನಿಕ ಅಭಿಮತ ಬಯಸಲಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ಮಾತುಕತೆ ನಡೆಸಿ ಸಚಿವರ ನೇತೃತ್ವದಲ್ಲಿ ಶೀಘ್ರದಲ್ಲೇ ಸಭೆಯೊಂದನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ.




